ಅಯೋಧ್ಯೆ ವಿವಾದ: ಇಂದು ಸುಪ್ರೀಂಕೋರ್ಟಲ್ಲಿ ವಿಚಾರಣೆ

ಮಧ್ಯಸ್ಥಿಕೆ ಸಮಿತಿಯ ವರದಿಯನ್ನು ಆಧರಿಸಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಸುಪ್ರೀಂಕೋರ್ಟ್ ನ ಐವರು ನ್ಯಾಯಮೂರ್ತಿಗಳ  ಪೀಠ ಮುಂದಿನ ವಿಚಾರಣೆ ನಡೆಸಲಿದೆ. 

Last Updated : Aug 2, 2019, 08:08 AM IST
ಅಯೋಧ್ಯೆ ವಿವಾದ: ಇಂದು ಸುಪ್ರೀಂಕೋರ್ಟಲ್ಲಿ ವಿಚಾರಣೆ title=

ನವದೆಹಲಿ: ಅಯೋಧ್ಯೆವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ಸಮಿತಿ ವರದಿಯ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿದೆ.

ದೇವಾಲಯದ ವಿವಾದದ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಪಕ್ಷಗಳ ನಡುವೆ ಒಮ್ಮತವನ್ನು ಬೆಳೆಸಲು ಮಾತುಕತೆ ಮುಂದುವರಿಸಲು ಜುಲೈ 31 ರವರೆಗೆ ಸಮಯ ಕೋರಿದ್ದ ಮಧ್ಯಸ್ಥಿಕೆ ಸಮಿತಿಯು ಗುರುವಾರ ವರದಿಯನ್ನು ಸಲ್ಲಿಸಿತ್ತು. ಈ ವರದಿಯನ್ನು ಆಧರಿಸಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಸುಪ್ರೀಂಕೋರ್ಟ್ ನ ಐವರು ನ್ಯಾಯಮೂರ್ತಿಗಳ  ಪೀಠ ಮುಂದಿನ ವಿಚಾರಣೆ ನಡೆಸಲಿದೆ. 

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಎಫ್ಎಂಐ ಕಲಿಫುಲ್ಲಾ ನೇತೃತ್ವದ ಮೂವರು ಸದಸ್ಯರ ಮಧ್ಯಸ್ಥಿಕೆ ಸಮಿತಿಯ ವರದಿಯನ್ನು ಸ್ವೀಕರಿಸಲಾಗಿದ್ದು, ವಿಷಯಗಳನ್ನು ದಾಖಲಿಸಲಾಗಿದೆ ಎಂದು ಕಳೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ತಿಳಿಸಿತ್ತು. ಅಲ್ಲದೆ,ಮಧ್ಯಸ್ಥಿಕೆ ಪ್ರಕ್ರಿಯೆಯು ತಿಂಗಳ ಅಂತ್ಯದವರೆಗೆ ಮುಂದುವರೆಯುವುದರಿಂದ ವರದಿಯು ವಿಷಯಗಳನ್ನು ಪ್ರಕಟಿಸಲು ನ್ಯಾಯಾಲಯ ನಿರ್ಬಂಧಿಸಿತ್ತು.
 

Trending News