ನವದೆಹಲಿ:ದೇಶ ಹಾಗೂ ಇಡೀ ವಿಶ್ವದಲ್ಲಿ ಸಾಕಷ್ಟು ಹಾನಿ ಮಾಡಿರುವ ಕೊರೊನಾ ವೈರಸ್ ಚಿಕಿತ್ಸೆಗೆ ಇಂದು ಬಾಬಾ ರಾಮದೇವ್ ಅವರ ಪತಂಜಲಿ ಯೋಗಪೀಠ ಇಂದು ಔಷಧಿ ಬಿಡುಗಡೆಗೊಳಿಸಿದೆ. ಪತಂಜಲಿ ಬಿಡುಗಡೆ ಗೊಳಸಿರುವ ಔಷಧಿಗೆ ಕೊರೋನಿಲ್ ಎಂಬ ಹೆಸರು ನೀಡಲಾಗಿದ್ದು, ಕೊರೊನಾ ವೈರಸ್ ಚಿಕಿತ್ಸೆಗೆ ಇದು ಪ್ರಭಾವಶಾಲಿಯಾಗಿದೆ ಎಂದು ಸಂಸ್ಥೆ ಹೇಳಿದೆ.



COMMERCIAL BREAK
SCROLL TO CONTINUE READING

ಪತಂಜಲಿ ರಿಸರ್ಚ್ ಇನ್ಸ್ಟಿಟ್ಯೂಟ್ (PRI) ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (NIMS), ಜೈಪುರ್ ಸಂಶೋಧಕರು ಜಂಟಿಯಾಗಿ ಈ ಔಷಧಿಯನ್ನು ಸಿದ್ಧಪಡಿಸಿದ್ದಾರೆ. ಔಷಧಿಯನ್ನು ತಯಾರಿಸುವ ಕೆಲಸ ಪತಂಜಲಿ ಹಾಗೂ ದಿವ್ಯ ಫಾರ್ಮಸಿ ಜಂಟಿಯಾಗಿ ನಡೆಸಲಿವೆ ಎನ್ನಲಾಗಿದೆ.


ಸದ್ಯ ಬಾಬಾ ರಾಮದೇವ್ ಹಾಗೂ ಅವರ ಸಹಯೋಗಿ ಆಚಾರ್ಯ ಬಾಲಕೃಷ್ಣ ಇತರರ ಜೊತೆಗೂಡಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಭಾರತದಲ್ಲಿ ಇದುವರೆಗೆ ಕೊರೊನಾ ಸೋಂಕಿತರ ಸಂಖ್ಯೆ 4.40 ಲಕ್ಷಕ್ಕೆ ತಲುಪಿದೆ. ಇದೇವೇಳೆ 14,011 ಜನರು ಈ ಮಾರಕ ಕಾಯಿಲೆಗೆ ಬಲಿಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಕೊರೊನಾ ವೈರಸ್ ಔಷಧಿ ಹಾಗೂ ಲಸಿಕೆಗಾಗಿ ತುದಿಗಾಲಲ್ಲಿ ಕಾಯುತ್ತಿದ್ದಾರೆ.