ನವದೆಹಲಿ: ಜನಸಂಖ್ಯಾ ನಿಯಂತ್ರಣಕ್ಕೆ ಕರೆ ನೀಡಿರುವ ಯೋಗ ಗುರು ಬಾಬಾ ರಾಮದೇವ್, ಅತಿ ಹೆಚ್ಚು ಮಕ್ಕಳಿಗೆ ಜನ್ಮ ನೀಡುವವರ ಮತದಾನದ ಹಕ್ಕನ್ನು ರದ್ದುಗೊಳಿಸಲು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೆ, ತಮ್ಮಂತೆ ಮದುವೆಯಾಗದೆ ಇರುವವರನ್ನು ಸನ್ಮಾನಿಸಬೇಕೆಂದು ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಾಬಾ ರಾಮದೇವ್ ದೇಶದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಬಗ್ಗೆ ಭಾರತೀಯರು ಗಮನಹರಿಸಬೇಕಿದೆ. ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರ ಮತದಾನದ ಹಕ್ಕು ರದ್ದು ಮಾಡಬೇಕು ಎಂದರು. 


ಇದಕ್ಕೂ ಮುನ್ನ, ಅಯೋಧ್ಯೆ ರಾಮಮಂದಿರ ನಿರ್ಮಾಣ ವಿಚಾರವಾಗಿ ಮಾತನಾಡಿದ ಬಾಬಾ ರಾಮದೇವ್, ಸುಪ್ರೀಂ ಕೋರ್ಟ್ ಈ ವಿವಾದದ ಬಗ್ಗೆ ತೀರ್ಪು ನೀಡುವಲ್ಲಿ ವಿಳಂಬ ಮಾಡುತ್ತಿದೆ. ಹಾಗಾಗಿ ಸಂಸತ್ತಿನಲ್ಲಿ ಕಾನೂನು ರಚಿಸುವ ಅಗತ್ಯವಿದೆ. ಸುಪ್ರೀಂ ಕೋರ್ಟ್ ಅಕ್ಟೋಬರ್ 29ರಂದು ಅಯೋಧ್ಯೆ ರಾಮಜನ್ಮ ಭೂಮಿ ವಿವಾದದ ಅಂತಿಮ ವಿಚಾರಣೆ ಆರಂಭಿಸುವುದಾಗಿ ಹೇಳಿತ್ತು. ಆದರೆ ಇದೀಗ ಆ ವಿಚಾರಣೆಯನ್ನು ಜನವರಿಗೆ ಮುಂದೂಡಿದೆ. ಅಂದಿನಿಂದ ಈ ವಿವಾದ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ ಎಂದರು.