ಪಿಎಫ್ಐ ನಿಷೇಧ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಅದರ ಮಿತ್ರಪಕ್ಷಗಳು ಮತ್ತು ಅದರ ಎಲ್ಲಾ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿರುವ ಕೇಂದ್ರ ಸರ್ಕಾರ, ತಕ್ಷಣದಿಂದ ಜಾರಿಗೆ ಬರುವಂತೆ ಈ ಎಲ್ಲಾ ಸಂಘಟನೆಗಳಿಗೂ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಕೇಂದ್ರ ಸರ್ಕಾರ ಅಧಿಕೃತ ಗೆಜೆಟ್‌ನಲ್ಲಿ ಇದನ್ನು ಪ್ರಕಟಿಸಿದ್ದು ಬಳಿಕ ಗೃಹ ಸಚಿವಾಲಯ ಈ ಆದೇಶ ಹೊರಡಿಸಿದೆ. ಯುಎಪಿಎ ಕಾಯ್ದೆಯಡಿ ಸಂಘಟನೆಯನ್ನು ನಿಷೇಧಿಸಲಾಗಿದೆ.
Central Government declares PFI (Popular Front of India) and its associates or affiliates or fronts as an unlawful association with immediate effect, for a period of five years. pic.twitter.com/ZVuDcBw8EL
— ANI (@ANI) September 28, 2022
ಮಂಗಳವಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೇರಿದಂತೆ ಭದ್ರತಾ ಸಂಸ್ಥೆಗಳು ಆರು ರಾಜ್ಯಗಳಲ್ಲಿ ತೀವ್ರಗಾಮಿ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ಕ್ರಮ ಕೈಗೊಂಡಿವೆ. ಈ ಅವಧಿಯಲ್ಲಿ ಉತ್ತರ ಪ್ರದೇಶ, ಕರ್ನಾಟಕ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಅಸ್ಸಾಂ ಮತ್ತು ಮಧ್ಯಪ್ರದೇಶದಲ್ಲಿ 230 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಮಂಗಳವಾರ ಮುಂಜಾನೆಯಿಂದಲೇ ಎನ್‌ಐಎ ಮತ್ತು ಪೊಲೀಸ್ ತಂಡಗಳು ಪಿಎಫ್‌ಐ ನೆಲೆಗಳ ಮೇಲೆ ದಾಳಿ ನಡೆಸಿ ಕರ್ನಾಟಕದಲ್ಲಿ ಗರಿಷ್ಠ 80 ಜನರನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದಲ್ಲಿ 57 ಜನರನ್ನು ಬಂಧಿಸಲಾಗಿದೆ. ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ 25-25 ಜನರನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದಲ್ಲಿ 15 ಜನರನ್ನು ಬಂಧಿಸಲಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 32, ಮಧ್ಯಪ್ರದೇಶದಲ್ಲಿ 21 ಮತ್ತು ಗುಜರಾತ್‌ನಲ್ಲಿ 17 ಮಂದಿ ಬಂಧನದಲ್ಲಿದ್ದಾರೆ.
ಇದನ್ನೂ ಓದಿ- ಧರ್ಮದ ಮುಖಂಡರ ಹತ್ಯೆಗೆ PFI ಟ್ರೈನಿಂಗ್? FIRನಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ.!
ಇದಕ್ಕೂ ಮುನ್ನ ಸೆಪ್ಟೆಂಬರ್ 22 ರಂದು ನಡೆದ ಕಾರ್ಯಾಚರಣೆಯಲ್ಲಿ 15 ರಾಜ್ಯಗಳಲ್ಲಿ 106 ಜನರನ್ನು ಬಂಧಿಸಲಾಗಿತ್ತು. ಪಿಎಫ್‌ಐ ಒಳಗೊಂಡ 19 ಎಫ್‌ಐಆರ್‌ಗಳ ಮೇಲೆ ಎನ್‌ಐಎ ಕ್ರಮ ಕೈಗೊಳ್ಳುತ್ತಿದೆ.
ಪಿಎಫ್‌ಐನಿಂದ ಪಿತೂರಿ:
ಸುದ್ದಿ ಸಂಸ್ಥೆ ಎಎನ್ಐಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ದೇಶದಾದ್ಯಂತ ಪ್ರತಿಭಟನೆಗಳು ಮತ್ತು ಭಯೋತ್ಪಾದಕ ಕೃತ್ಯಗಳ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಪಿಎಫ್‌ಐನಿಂದ ಪಿತೂರಿ ನಡೆದಿತ್ತು. ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಅಶಾಂತಿ ಹರಡಲು ಸಿದ್ಧತೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ- ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆ ರಾಜ್ಯಾದ್ಯಂತ ದಾಳಿ: ಎಡಿಜಿಪಿ ಅಲೋಕ್ ಕುಮಾರ್
ಏನಿದು ಪಿಎಫ್ಐ?
ಪಿಎಫ್ಐ ಅನ್ನು 2006 ರಲ್ಲಿ ಕೇರಳದಲ್ಲಿ ಸ್ಥಾಪಿಸಲಾಯಿತು. ಈ ಸಂಘಟನೆಯು ಭಾರತದಲ್ಲಿ ಅಂಚಿನಲ್ಲಿರುವ ವಿಭಾಗಗಳ ಸಬಲೀಕರಣಕ್ಕಾಗಿ ನವ-ಸಾಮಾಜಿಕ ಆಂದೋಲನವನ್ನು ನಡೆಸುತ್ತಿದೆ ಎಂದು ಹೇಳಿಕೊಳ್ಳುತ್ತದೆ. ಆದಾಗ್ಯೂ, ಪಿಎಫ್‌ಐ ಮೂಲಭೂತ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡುತ್ತಿದೆ ಎಂದು ಭದ್ರತಾ ಸಂಸ್ಥೆಗಳು ಹೇಳಿಕೊಂಡಿವೆ. ಈ ಸಂಸ್ಥೆಯನ್ನು ಕೇರಳದಲ್ಲಿ ಸ್ಥಾಪಿಸಲಾಗಿದೆ ಮತ್ತು ಇದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ.
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...