ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಹಾರಾಟದ ಮೇಲಿನ ನಿಬಂಧನೆಯನ್ನು ಸೆಪ್ಟೆಂಬರ್ 30, 2021 ರವರೆಗೆ ವಿಸ್ತರಿಸಲಾಗಿದೆ.ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಡಿಜಿಸಿಎ ಕಚೇರಿಯ ಸುತ್ತೋಲೆಯಲ್ಲಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ: India vs Eng 3rd Test: ಭಾರತ ಈ ಟೆಸ್ಟ್ ಪಂದ್ಯದಲ್ಲಿ ಸೋಲಲಿದೆ-ಮೈಕಲ್ ವಾನ್
ಆಯ್ದ ಮಾರ್ಗಗಳಲ್ಲಿ ಕೆಲವು ಅಂತಾರಾಷ್ಟ್ರೀಯ ನಿಗದಿತ ವಿಮಾನ (International flights) ಗಳನ್ನು ಅನುಮತಿಸಬಹುದು ಎಂದು ಸುತ್ತೋಲೆ ಸೇರಿಸಲಾಗಿದೆ. ಕೇಸ್ ಟು ಕೇಸ್ ಆಧಾರದ ಮೇಲೆ ಈ ನಿರ್ಧಾರವನ್ನು ಪ್ರಾಧಿಕಾರವು ತೆಗೆದುಕೊಳ್ಳುತ್ತದೆ.ಈ ನಿರ್ಬಂಧವು ಅಂತಾರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳಿಗೆ ಮತ್ತು ನಿರ್ದಿಷ್ಟವಾಗಿ ಅನುಮೋದಿತ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಡಿಜಿಸಿಎ ಹೇಳಿದೆ.
ಇದನ್ನೂ ಓದಿ: Ind Vs Eng Test Series: Sachin Tendulkar ಸಿಡ್ನಿಯಲ್ಲಿ ಮಾಡಿದ್ದನ್ನು Virat Kohli ಪುನರಾವರ್ತಿಸಬೇಕು - ಗಾವಸ್ಕರ್
"ಜೂನ್ 26, 2021 ರ ಸುತ್ತೋಲೆಯ ಭಾಗಶಃ ಮಾರ್ಪಾಡಿನಲ್ಲಿ, ಸಮರ್ಥ ಪ್ರಾಧಿಕಾರವು ಈ ವಿಷಯದ ಮೇಲೆ ನೀಡಲಾದ ಸುತ್ತೋಲೆಯ ಸಿಂಧುತ್ವವನ್ನು ಮತ್ತಷ್ಟು ವಿಸ್ತರಿಸಿದೆ" ಎಂದು ಡಿಜಿಸಿಎ ಸುತ್ತೋಲೆಯಲ್ಲಿ ಹೇಳಲಾಗಿದೆ.
"ಈ ನಿರ್ಬಂಧವು ಅಂತಾರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳಿಗೆ ಮತ್ತು ನಿರ್ದಿಷ್ಟವಾಗಿ ಡಿಜಿಸಿಎ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ, ಅಂತಾರಾಷ್ಟ್ರೀಯ ನಿಗದಿತ ವಿಮಾನಗಳನ್ನು ಆಯಾ ಮಾರ್ಗಗಳಲ್ಲಿ ಸಮರ್ಥ ಪ್ರಾಧಿಕಾರವು ಪ್ರಕರಣದ ಆಧಾರದ ಮೇಲೆ ಅನುಮತಿಸಬಹುದು" ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.ಈ ಮೊದಲು, ಪ್ರಾಧಿಕಾರವು ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಆಗಸ್ಟ್ 31 ರವರೆಗೆ ಸ್ಥಗಿತಗೊಳಿಸಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ