ಲಕ್ನೋ: ಇಲ್ಲಿನ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಪಾಸ್‌ಪೋರ್ಟ್‌ನೊಂದಿಗೆ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ನಕಲಿ ಪಾಸ್‌ಪೋರ್ಟ್ ಹೊಂದಿದ್ದ ವ್ಯಕಿಯನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. 


ಬಂಧಿತ ಆರೋಪಿ ಸತ್ಯಜಿತ್ ದಾಸ್ ಎಂಬ ನಕಲಿ ಹೆಸರಿನೊಂದಿಗೆ ಪ್ರಯಾಣಿಸುತ್ತಿದ್ದ ಮತ್ತು ಆತನ ವಿಳಾಸ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯೆಂದು ನಮೂದಾಗಿತ್ತು. ಆದರೆ ಆತ ಬಾಂಗ್ಲಾದೇಶದ ಪ್ರಜೆಯಾಗಿದ್ದು, ಶಾರ್ಜಾದಿಂದ ಭಾರತಕ್ಕೆ ಪ್ರಯಾಣಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 


ನಕಲಿ ಪಾಸ್ಪೋರ್ಸ್ಟ್ ಹೊಂದಿರುವ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಲಕ್ನೋ ಪೊಲೀಸರಿಗೆ ಒಪ್ಪಿಸಲಾಗಿದೆ.