ಚೆನ್ನೈ: 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಘಟಕಗಳಾಗಿ ವಿಲೀನಗೊಳಿಸುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸದಸ್ಯರು ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳ ನೌಕರರು ಸರ್ಕಾರದ ನಿರ್ಧಾರಕ್ಕೆ ಪ್ರತಿಭಟನೆಯ ಸಂಕೇತವಾಗಿ ಕಪ್ಪು ಬ್ಯಾಡ್ಜ್ಗಳನ್ನು ಧರಿಸಿದ್ದರು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲ ಮಾತನಾಡಿ' ಸಾರ್ವಜನಿಕ ವಲಯದ ಬ್ಯಾಂಕುಗಳ ವಿಲೀನ ಎಂದರೆ ಆರು ಬ್ಯಾಂಕುಗಳನ್ನು ಮುಚ್ಚುವುದು ಎಂದರ್ಥ. 2008 ರಲ್ಲಿ ಆರ್ಥಿಕ ಹಿಂಜರಿತವನ್ನು ಪ್ರಪಂಚದಾದ್ಯಂತ ಅನುಭವಿಸಿದಾಗ, ಸಾರ್ವಜನಿಕ ವಲಯದ ಬ್ಯಾಂಕುಗಳ ಕಾರಣದಿಂದಾಗಿ ದೇಶೀಯ ಬ್ಯಾಂಕಿಂಗ್ ವ್ಯವಸ್ಥೆಯು ಸುರಕ್ಷಿತವಾಗಿತ್ತು ಎಂದು ಅವರು ನೆನಪಿಸಿಕೊಂಡರು. ಮುಂದಿನ ಕಾರ್ಯಚೂಚಿಯ ಭಾಗವಾಗಿ ಮುಷ್ಕರ ನಡೆಸುವ ಬಗ್ಗೆ ತೀರ್ಮಾನಿಸಲು ಯೂನಿಯನ್ ಸೆಪ್ಟೆಂಬರ್ 11 ರಂದು ನವದೆಹಲಿಯಲ್ಲಿ ಸಭೆ ಸೇರುತ್ತದೆ ಎಂದು ಹೇಳಿದರು.
ಕೇಂದ್ರದ ಬಿಜೆಪಿ ಸರ್ಕಾರವು 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕನ್ನಾಗಿ ವಿಲೀನಗೊಳಿಸುವ, ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವಂತೆ ಕಡಿಮೆ ಮತ್ತು ಬಲವಾದ ಜಾಗತಿಕ ಗಾತ್ರದ ಬ್ಯಾಂಕರ್ಗಳನ್ನು ಸೃಷ್ಟಿಸುವ ಮೆಗಾ ಯೋಜನೆಯನ್ನು ಶುಕ್ರವಾರ ಅನಾವರಣಗೊಳಿಸಿತ್ತು.
ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ, ಅಲಹಾಬಾದ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಆಂಧ್ರ ಬ್ಯಾಂಕ್ ಒಟ್ಟುಸಾರ್ವಜನಿಕ ವಲಯದ ಬ್ಯಾಂಕುಗಳು ವಿಲೀನಗೊಂಡಿವೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದ್ದರು.