Baramulla Encounter: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಟ್ಟಾನ್‌ನ ಯಡಿಪೋರಾ ಗ್ರಾಮದಲ್ಲಿ ಶುಕ್ರವಾರ (ಸೆಪ್ಟೆಂಬರ್ 30) ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಮಟ್ಟಹಾಕಲಾಗಿದೆ, ಜಿಲ್ಲೆಯಲ್ಲಿ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿಯ ಮೇಲೆ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಇಂದು ಬೆಳಗ್ಗೆ ಎನ್‌ಕೌಂಟರ್ ಆರಂಭಿಸಲಾಗಿದ್ದು, ಇದು ಸುಮಾರು 10 ಗಂಟೆಗಳ ಕಾಲ ನಡೆದಿದೆ. ಜಿಲ್ಲೆಯ ಸೆಕ್ಟರ್ 10 ರಲ್ಲಿರುವ ಹೈದರ್‌ಬೇಗ್ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ‍್ಯಾಲಿಯ ಮೇಲೆ ದಾಳಿ ನಡೆಸಲು ಈ ಭಯೋತ್ಪಾದಕರು ಬಂದಿದ್ದರು ಎಂದು ಬಾರಾಮುಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೈಸ್ ಭಟ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಣಕ್ಕಿಳಿದ ಖರ್ಗೆ..! ಏನಿದೆ ರಾಜಕೀಯ ಲೆಕ್ಕಾಚಾರ ?


ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಗ್ರಾಮದಲ್ಲಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ರೈಸ್ ಭಟ್ ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆಯ ವೇಳೆ ಅಡಗಿ ಕುಳಿತಿದ್ದ ಉಗ್ರರ ಸಂಪರ್ಕವೂ ಪತ್ತೆಯಾಗಿದೆ. ಹತ್ಯೆಗೀಡಾದ ಇಬ್ಬರು ಭಯೋತ್ಪಾದಕರ ಬಗ್ಗೆ ಪ್ರಾಥಮಿಕ ತನಿಖೆಯಿಂದ ಅವರು ಅಗ್ನಿವೀರ್ ನೇಮಕಾತಿ ರ‍್ಯಾಲಿ ಮೇಲೆ ದಾಳಿ ಮಾಡಲು ಯೋಜಿಸಿದ್ದರು ಎಂದು ತಿಳಿದುಬಂದಿದೆ. ಹತ್ಯೆಗೀಡಾದ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದು, ಅವರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ-ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ 

ಎನ್‌ಕೌಂಟರ್ ಸ್ಥಳದಿಂದ AK-47 ನ ಹೊಸ ಮಾದರಿಯಾದ AK-74U ಅನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಎಕೆ ರೈಫಲ್, 3 ಮ್ಯಾಗಜಿನ್, ಪಿಸ್ತೂಲ್ ಇರುವ ಮ್ಯಾಗಜೀನ್, 2 ಗುಂಡುಗಳು ಪತ್ತೆಯಾಗಿವೆ. ಆದರೆ ಇದು ಮೊದಲ ಎನ್ಕೌಂಟರ್ ಅಲ್ಲ. ಮಂಗಳವಾರವೂ ಕೂಡ (ಸೆಪ್ಟೆಂಬರ್ 27) ಕುಲ್ಗಾಮ್‌ನ ಅಹ್ವಾತು ಪ್ರದೇಶದಲ್ಲಿ ಜೈಶ್-ಎ-ಮೊಹಮ್ಮದ್‌ನ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.