ಬರೇಲಿ: ಬರೇಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಟ್ರಕ್-ವ್ಯಾನ್ ಮತ್ತು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಈ ಘರ್ಷಣೆಯಲ್ಲಿ 8 ಜನರು ಸಾವನ್ನಪ್ಪಿದ್ದರೆ, 4 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ 2 ಮಕ್ಕಳು, 4 ಮಹಿಳೆಯರು ಮತ್ತು 2 ಪುರುಷರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.


COMMERCIAL BREAK
SCROLL TO CONTINUE READING

ಅಪಘಾತದಲ್ಲಿ ಮೃತಪಟ್ಟ 8 ಜನರಲ್ಲಿ 5 ಜನರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ. ಅಪಘಾತದ ಮಾಹಿತಿಯ ನಂತರ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.


ಘಟನೆಯ ಮಾಹಿತಿಯ ಪಡೆದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಬುಧವಾರ ಸಂಜೆ ಬಿಸಾಲ್‌ಪುರದಿಂದ ಬರೇಲಿ ಕಡೆಗೆ ಹೋಗುತ್ತಿದ್ದ ಟ್ರಕ್ ಮೊದಲು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಬರೇಲಿ ಕಂಟ್ರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಸರ್ ಸಿಂಗ್ ತಿಳಿಸಿದ್ದಾರೆ. 


ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದು, ಆತನ ಹುಡುಕಾಟ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.