ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಅಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.


COMMERCIAL BREAK
SCROLL TO CONTINUE READING

ಲಭ್ಯವಾದ ಮಾಹಿತಿ ಅನ್ವಯ ಸೌರವ್ ಗಂಗೂಲಿ(Sourav Ganguly)ಗೆ ಹೃದಯಾಘಾತ ಆಗಿದೆ ಎನ್ನಲಾಗಿದೆ. ಇಂದು ಕೊಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿರುವ ದಾದಾಗೆ ಇಂದು ಸಂಜೆಯೊಳಗಾಗಿ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿಲಿದ್ದಾರೆ ಎಂದು ಹೇಳಲಾಗಿದೆ.


ವಿರಾಟ್ ಕೊಹ್ಲಿ ಪಿತೃತ್ವ ರಜೆ ಬಗ್ಗೆ ಮಾಜಿ ಆಟಗಾರ ಫಾರೂಕ್ ಇಂಜನಿಯರ್ ಹೇಳಿದ್ದೇನು?


ಇಂದು ಮುಂಜಾನೆ ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದಾಗ ಗಂಗೂಲಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೋಲ್ಕತ್ತಾದ ವುಡ್‌ಲ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಜಿಯೋಪ್ಲ್ಯಾಸ್ಟಿ ನಡೆಸಿದ ಬಳಿಕ ಗಂಗೂಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.


Australia vs India:ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ರೋಹಿತ್ ಶರ್ಮಾ ಉಪನಾಯಕ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.