ನವದೆಹಲಿ: ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ರಾಜಕೀಯ ಪ್ರವೇಶಿಸಲಿದ್ದಾರೆ. ಶೀಘ್ರದಲ್ಲೇ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಈ ಮಧ್ಯೆ ಇದೇ ಮೊದಲ ಬಾರಿಗೆ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸೌರವ್ ಗಂಗೂಲಿ ಮೌನ ಮುರಿದಿದ್ದಾರೆ.


COMMERCIAL BREAK
SCROLL TO CONTINUE READING

ತಾವು ಅಥವಾ ತಮ್ಮ ಕುಟುಂಬದ ಸದಸ್ಯರು ರಾಜಕೀಯ ಪ್ರವೇಶಿಸಲಿದ್ದಾರೆ? ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬುದನ್ನು  ತಳ್ಳಿ ಹಾಕಿದ ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ ತಮ್ಮ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರ ಭೇಟಿ ಸೌಜನ್ಯದ ಭೇಟಿಯಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ: ವೇಗದ ಬೌಲರ್ ಮೊಹಮ್ಮದ್ ಸಿರಾಜ್ ನಿರ್ಧಾರಕ್ಕೆ ಸೌರವ್ ಗಂಗೂಲಿ ಸೆಲ್ಯೂಟ್


ದಾದಾ ರಾಜಕೀಯ ಪ್ರವೇಶದ ಊಹಾಪೋಹಗಳ ಮಧ್ಯೆ ಸೌರವ್ ಗಂಗೂಲಿ ಅವರು ಪಶ್ಚಿಮ ಬಂಗಾಳ (West Bengal) ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿ ಆಗಿದ್ದರು. ಈ ಸಂದರ್ಭದಲ್ಲಿ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಕೇಳಿಬಂದಿತ್ತು. 


Sourav Ganguly) ಅವರೇ ಇದಕ್ಕೆ ಸ್ಪಷ್ಟನೆ ನೀಡಿದ್ದು ರಾಜ್ಯಪಾಲರು ಯಾರನ್ನೇ ಭೇಟಿ ಮಾಡಲು ಬಯಸಿದರೆ ಅವರನ್ನು ಭೇಟಿ ಮಾಡಬೇಕು. ನೀವು ನನ್ನ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲರ ಭೇಟಿಯನ್ನೂ ಹಾಗೆಯೇ ನೋಡಬೇಕು ಎಂದಿದ್ದಾರೆ.


ಸೌರವ್ ಗಂಗೂಲಿ ಟಿ-20 ಮಾದರಿಗೆ ‌ಹೊಂದಿಕೆಯಾಗಲಿಲ್ಲ-ಜಾನ್ ಬುಕಾನನ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.