Bihar CM Reaction on Begusarai Firing: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೇಗುಸರಾಯಿ ಗುಂಡಿನ ದಾಳಿಗೆ ಸಂಬಂಧಿಸಿದಂತೆ ತನ್ನ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವ ಆತಂಕವನ್ನು ಅವರು ಹೊರಹಾಕಿದ್ದಾರೆ.  ಪ್ರತಿಯೊಂದು ವಿಷಯದ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಅಲ್ಲದೇ ಪ್ರಾಥಮಿಕವಾಗಿ ಇದೊಂದು ಷಡ್ಯಂತ್ರ ಎಂಬಂತೆ ತೋರುತ್ತಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೇ ಅತ್ಯಂತ ಹಿಂದುಳಿದ ಜಾತಿಯ ಜನರನ್ನು ಈ ಘಟನೆಯಲ್ಲಿ ಟಾರ್ಗೆಟ್ ಮಾಡಲಾಗಿದೆ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸಿಎಂ ನಿತೀಶ್ ವಿರುದ್ಧ ಎದ್ದ ಸವಾಲುಗಳು
ಬಿಹಾರದ ಬೇಗುಸರಾಯ್‌ನಲ್ಲಿ ನಡೆದ ಗುಂಡಿನ ದಾಳಿಯ ನಂತರ ನಿತೀಶ್ ಕುಮಾರ್ ಅವರ ಉತ್ತಮ ಆಡಳಿತದ ಬಗ್ಗೆ ಇದೀಗ ಪ್ರಶ್ನೆಗಳು ಏಳಲಾರಂಭಿಸಿವೆ. ಬಿಜೆಪಿ ಅವರ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಇದೇ ವೇಳೆ ನಿತೀಶ್ ಕುಮಾರ್ ಅವರು ಡಿಜಿಪಿ ಅವರನ್ನು ಭೇಟಿ ಮಾಡಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ. ಇದೇ ಮೊದಲ ಬಾರಿಗೆ ನಿತೀಶ್ ಕುಮಾರ್ ಅವರು ಬೇಗುಸರಾಯ್ ಗುಂಡಿನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದು, ಇದರಲ್ಲಿ ಪಿತೂರಿ ನಡೆದಿರುವ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಕರ್ತವ್ಯಲೋಪ ಎಸಗಿದ ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಘಟನೆಯ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ-ಹಿಂದಿ ದಿವಸ್ ಅನ್ನು ಸೆಪ್ಟೆಂಬರ್ 14 ರಂದು ಆಚರಿಸುವುದೇಕೆ?


ಮಂಗಳವಾರ ನಡೆದ ಫೈರಿಂಗ್ ಘಟನೆ
ಮಂಗಳವಾರ ಸಂಜೆ ಬೆಗುಸರಾಯ್‌ನಲ್ಲಿ ಇಬ್ಬರು ನಿರ್ಭೀತ ದುಷ್ಕರ್ಮಿಗಳು ಬೈಕ್ ಮೇಲೆ ಬಂದು 11 ಅಮಾಯಕರ ಮೇಲೆ ಗುಂಡು ಹಾರಿಸಿದ್ದಾರೆ. ಅವರಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಇತರರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ನಂತರ ಪೊಲೀಸರು ಇಡೀ ಪ್ರದೇಶವನ್ನು ನಿರ್ಬಂಧಿಸಿದ್ದಾರೆ.


ಇದನ್ನೂ ಓದಿ-Monkey Video : ಶಾಲೆಗೆ ಬಂದ ಮಂಗಣ್ಣ.! ವಿದ್ಯಾರ್ಥಿ ಪಕ್ಕ ಕುಳಿತು ಮಾಡಿದ ಕಿತಾಪತಿ ನೋಡಿ


ಈ ಪ್ರಕರಣದ ಅಪರಾಧಿಗಳು ಎಷ್ಟೊಂದು ನಿರ್ಭೀತರಾಗಿದ್ದರು ಎಂದರೆ, ರಾಷ್ಟ್ರೀಯ ಹೆದ್ದಾರಿ 28 ರಲ್ಲಿ ಬರುವ  ನಾಲ್ಕು ಪೊಲೀಸ್ ಠಾಣಾ ಕ್ಷೇತ್ರಗಳನ್ನು ಒಳಗೊಂಡಂತೆ ಒಟ್ಟು 30 ಕಿಲೋಮೀಟರ್ ಚಲಿಸಿ 40 ನಿಮಿಷಗಳ ಕಾಲ ದಾರಿಯಲ್ಲಿ ಸಂಚರಿಸುತ್ತಿದ್ದ ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ. ಪ್ರಸ್ತುತ ತಲೆಮರೆಸಿಕೊಂಡಿರುವ ಈ ದುಷ್ಕರ್ಮಿಗಳ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಮೂರು ತಂಡಗಳನ್ನು ರಚಿಸಲಾಗಿದ್ದು, ಹಲವೆಡೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.