ನವದೆಹಲಿ: ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 50 ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆ (Job)ಗಳ ಬಗೆಗಿನ ಅಧಿಸೂಚನೆಯನ್ನು ಪರಿಶೀಲಿಸಬಹುದು.


COMMERCIAL BREAK
SCROLL TO CONTINUE READING

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.


ವಿದ್ಯಾರ್ಹತೆ: ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


JOB: ಆರೋಗ್ಯ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ನೇರ ಸಂದರ್ಶನ


ವಯೋಮಿತಿ: ಡಿಸೆಂಬರ್ 31,2020ರ ಅನ್ವಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.


ವೇತನ: ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,110/-ರೂ ಸ್ಟೈಫೆಂಡ್ ನೀಡಲಾಗುವುದು.


ಮನೆಯಲ್ಲಿ ಆರ್ಥಿಕ ಸಮಸ್ಯೆಯೇ? ಹಾಗಿದ್ರೆ ಪ್ರತಿ ಸೋಮವಾರ ಈ ಕೆಲಸ ಮಾಡಿ


ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಬಿ.ಇ/ಬಿ.ಟೆಕ್ ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 23, 2020ರೊಳಗೆ ಅರ್ಜಿ ಸಲ್ಲಿಸಬಹುದು.