ಬೆಂಗಳೂರು: ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳ ಅವಧಿಯಲ್ಲಿ ನಡೆಯಲಿರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.


COMMERCIAL BREAK
SCROLL TO CONTINUE READING

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಮತ್ತು ಪಕ್ಷದ ಪಶ್ಚಿಮ ಬಂಗಾಳ ಚುನಾವಣೆಯ ಉಸ್ತುವಾರಿಗಳಲ್ಲಿ ಒಬ್ಬರಾದ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಸ್ಥಾನ ನೀಡಲಾಗಿದೆ.


Yashwant Sinha: ಬಿಜೆಪಿ ಮಾಜಿ ನಾಯಕ 'ಯಶವಂತಸಿನ್ಹಾ' ಟಿಎಂಸಿ ಪಾರ್ಟಿ ಸೇರ್ಪಡೆ!


ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌, ರಾಹುಲ್‌ ಗಾಂಧಿ(Rahul Gandhi), ಪ್ರಿಯಾಂಕಾ ಗಾಂಧಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಸೇರಿದಂತೆ 30 ಜನ ತಾರಾ ಪ್ರಚಾರಕರ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿಗೆ ಶುಕ್ರವಾರ ಸಲ್ಲಿಸಿದ್ದಾರೆ.


NEET UG 2021 Exam: ಆಗಸ್ಟ್ 1 ರಿಂದ NEET ಪರೀಕ್ಷೆ, ಹಿಂದಿ ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು


ಖರ್ಗೆ ಅವರು ಕಾಂಗ್ರೆಸ್(Congress) ಸ್ಟಾರ್ ಪ್ರಚಾರಕರ ಪಟ್ಟಿಯ ಐದನೇ ಸ್ಥಾನದಲ್ಲಿದ್ದರೆ, ಹರಿಪ್ರಸಾದ್‌ ಹೆಸರು 11ನೇ ಸ್ಥಾನದಲ್ಲಿದ್ದಾರೆ. ಮಾರ್ಚ್ 15ರ ನಂತರ ನಾನು ಪಶ್ಚಿಮ ಬಂಗಾಳಕ್ಕೆ ತೆರಳುತ್ತೇನೆ, ಅಲ್ಲಿನ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಫೈಟ್ ನೀಡಲಿದೆ ಎಂದು ಹರಿ ಪ್ರಸಾದ್ ಭರವಸೆ ವ್ಯಕ್ತ ಪಡಿಸಿದ್ದಾರೆ.


AIADMK ಮೇಡಂ ಜಯಲಲಿತಾ ಪಕ್ಷವಲ್ಲ, ಬಿಜೆಪಿ ಗುಲಾಮ: AIMIM ಮುಖ್ಯಸ್ಥ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.