Bengaluru Gang Rape Case: 12 ಮಂದಿಯ ಬಂಧನ, ಶಂಕಿತರಿಂದ ವಿಡಿಯೋ ಹಂಚಿಕೆ

ಬಾಂಗ್ಲಾದೇಶದ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಒಟ್ಟು 12 ಮಂದಿಯನ್ನು ಬಂಧಿಸಲಾಗಿದೆ.

Written by - Puttaraj K Alur | Last Updated : Jul 8, 2021, 06:25 PM IST
  • ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು
  • ಗ್ಯಾಂಗ್ ರೇಪ್ ಪ್ರಕರಣ ಸಂಬಂಧ 12 ಮಂದಿಯನ್ನು ಬಂಧಿಸಿರುವ ಬೆಂಗಳೂರು ಪೊಲೀಸರು
  • ಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಣೆ ಮೂಲಕ ಭಾರತಕ್ಕೆ ಸಂತ್ರಸ್ತ ಯುವತಿಯನ್ನು ಕರೆತಂದಿದ್ದ ಆರೋಪಿಗಳು
Bengaluru Gang Rape Case: 12 ಮಂದಿಯ ಬಂಧನ, ಶಂಕಿತರಿಂದ ವಿಡಿಯೋ ಹಂಚಿಕೆ title=
12 ಆರೋಪಿಗಳನ್ನು ಬಂಧಿಸಿರುವ ಬೆಂಗಳೂರು ಪೊಲೀಸರು

ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳಿಸಿದ್ದ ಬಾಂಗ್ಲಾದೇಶದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ(Gang Rape Case) ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.

ಗುರುವಾರ ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಅವರು, ಬಾಂಗ್ಲಾದೇಶ(Bangladesh)ದ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಒಟ್ಟು 12 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಮಹಿಳೆಯರಿದ್ದು,  ಈ ಪೈಕಿ 11 ಮಂದಿ ಬಾಂಗ್ಲಾ ಪ್ರಜೆಗಳಾಗಿದ್ದಾರೆಂದು ತಿಳಿಸಿದ್ದಾರೆ.

 

ಘಟನೆ ನಡೆದ ಕೆಲ ವಾರಗಳಲ್ಲಿಯೇ ಪ್ರಕರಣದ ತನಿಖೆ ಸಂಪೂರ್ಣಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಚಾರ್ಜ್ ಶೀಟ್ ಕೂಡ ಸಲ್ಲಿಸಲಾಗಿದೆ. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ  ಕಮಲ್ ಪಂತ್(Kamal Pant), 1 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.  

ಇದನ್ನೂ ಓದಿ: Rekha Kadiresh Murder Case : BBMP ಮಾಜಿ ಸದಸ್ಯೆಯ ಕೊಲೆ ಪ್ರಕರಣ : ಆರೋಪಿಗಳು ಅರೆಸ್ಟ್

ಇದೇ ವರ್ಷದ ಮೇ ತಿಂಗಳಿನಲ್ಲಿ ಬೆಂಗಳೂರಿ(Bengaluru)ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜಧಾನಿಯನ್ನೇ ಬೆಚ್ಚಿಬೀಳಿಸಿತ್ತು. ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ(Sexual Harassment)ವೆಸಗಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಬಳಿಕ 22 ವರ್ಷದ ಯುವತಿಯ ಮೇಲೆ ಗ್ಯಾಂಗ್ ರೇಪ್ ಆಗಿರುವುದು ಬೆಳಕಿಗೆ ಬಂದಿತ್ತು.

ಅಸ್ಸಾಂ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಸಕ್ರಿಯವಾಗಿರುವ ಮಾನವ ಕಳ್ಳಸಾಗಣೆ(Human trafficking)ದಾರರ ಜಾಲವು ಅತ್ಯಾಚಾರ ಸಂತ್ರಸ್ತೆಯನ್ನು ಬಾಂಗ್ಲಾದೇಶದಿಂದ ಕಳ್ಳಸಾಗಣೆ ಮಾಡಿದ್ದಾರೆ. ಬಳಿಕ ಯುವತಿಯನ್ನು ಆರೋಪಿಗಳು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ಬಳಸಲು ಯತ್ನಿಸಿದ್ದಾರೆಂದು ಪೊಲೀಸರು ಆರೋಪಿಸಿದ್ದಾರೆ.   

ಬಂಧಿತ ಎಲ್ಲ ಆರೋಪಿಗಳು ಒಂದೇ ಗುಂಪಿಗೆ ಸೇರಿದವರಾಗಿದ್ದು, ಬಾಂಗ್ಲಾದೇಶದ ಪ್ರಜೆಗಳು ಎನ್ನುವ ಮಾಹಿತಿ ದೊರೆತಿದೆ. ಹಣಕಾಸಿನ ವಿಷಯವಾಗಿ ನಡೆದ ವಾಗ್ವಾದದ ಬಳಿಕ ಆರೋಪಿಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ(Gang Rape)ವೆಸಗಿ, ಬಳಿಕ ಚಿತ್ರಹಿಂಸೆ ನೀಡಿದ್ದಾರೆ. ಅತ್ಯಾಚಾರದ ಬಳಿಕ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿತ್ತು.  

ಇದನ್ನೂ ಓದಿ: Shobha Karandlaje : 'ನಾನು ರೈತನ ಮಗಳು, ರೈತರಿಗಾಗಿ ಕೆಲಸ ಮಾಡುತ್ತೇನೆ'

ಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಣೆ ಮೂಲಕ ಭಾರತಕ್ಕೆ ಯುವತಿಯನ್ನು ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ(Prostitution) ದಂಧೆಗೆ ನುಕಲು ಆರೋಪಿಗಳು ಯತ್ನಿಸಿದ್ದರೆಂದು ಪೊಲೀಸರು ಹೇಳಿಕೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದ ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News