ನವದೆಹಲಿ: ಭವಾನಿಪುರ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸೋಲನ್ನು ಅನುಭವಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಅವರು ಭಾನುವಾರ ಮತದಾರರ ಬೆಂಬಲ ಮತ್ತು ಆಶೀರ್ವಾದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಅವರು ತಮ್ಮ ಕೆಲಸ ಮುಂದುವರಿಸುವುದಾಗಿ ಹೇಳಿದರು.


COMMERCIAL BREAK
SCROLL TO CONTINUE READING

ಮಮತಾ ಬ್ಯಾನರ್ಜಿ (Mamata Banerjee) ಯ ಭದ್ರಕೋಟೆಯಲ್ಲಿ ನಿರ್ಣಾಯಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಿಂದ ಟಿಬ್ರೆವಾಲ್ ತನ್ನನ್ನು "ಭಾಬನಿಪುರ್ ಪಂದ್ಯದ" ಮ್ಯಾನ್ ಆಫ್ ದಿ ಮ್ಯಾಚ್ ಎಂದು ಕರೆದುಕೊಂಡರು."ನಾನು ಈ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಆಗಿದ್ದೇನೆ, ಏಕೆಂದರೆ ನಾನು ಮಮತಾ ಬ್ಯಾನರ್ಜಿಯ ಭದ್ರಕೋಟೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ ಮತ್ತು 25,000 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದೇನೆ. ನಾನು ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ'ಎಂದು ಟಿಬ್ರೆವಾಲ್ ಹೇಳಿದರು.


ಆ ಹಣ ಎಲ್ಲಿದೆ ?: ಪಿಎಂ ಕೇರ್ಸ್ ಫಂಡ್ ಬಗ್ಗೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಪ್ರಶ್ನೆ


ಭಾನುವಾರ ಆರಂಭವಾದ 21 ಸುತ್ತುಗಳ ಮತ ಎಣಿಕೆ ಮುಗಿದ ನಂತರ ಮಮತಾ ಬ್ಯಾನರ್ಜಿ 58,000 ಮತಗಳ ದಾಖಲೆಯ ಅಂತರದಿಂದ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಸೋಲಿಸಿದರು.ದಕ್ಷಿಣ ಕೋಲ್ಕತ್ತಾದ ಭಬನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿದ್ದ ಬ್ಯಾನರ್ಜಿ ಅಧಿಕೃತ ಅಂಕಿ-ಅಂಶಗಳ ಪ್ರಕಾರ 21 ಸುತ್ತುಗಳ ಎಣಿಕೆಯ ನಂತರ 84,709 ಮತಗಳನ್ನು ಪಡೆದರು.ಅವರ ಹತ್ತಿರದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ 26320 ಮತಗಳನ್ನು ಪಡೆದರೆ, ಸಿಪಿಐ (ಎಂ) ನ ಶ್ರೀಜಿಬ್ ಬಿಸ್ವಾಸ್ 4201 ಮತಗಳನ್ನು ಪಡೆದರು.


ಇದನ್ನೂ ಓದಿ: "ಮಮತಾ ದೀದಿ ಹೇಳಿದ್ದೆಲ್ಲವೂ ನನ್ನ ಕಿವಿಗೆ ಸಂಗೀತದಂತೆ"


'ನಂದಿಗ್ರಾಮದಲ್ಲಿ ರೂಪಿಸಲಾದ ಪಿತೂರಿಗೆ ಭಬನಿಪುರದ ಜನರು ತಕ್ಕ ಉತ್ತರ ನೀಡಿದ್ದಾರೆ. ಇಂದಿನ ಚುನಾವಣಾ ಫಲಿತಾಂಶಕ್ಕಾಗಿ ನಾನು ಮತ್ತೊಮ್ಮೆ ಭಬನಿಪುರ ಮತ್ತು ಪಶ್ಚಿಮ ಬಂಗಾಳದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ಅವರು ಜನರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತಾರೆ ಎಂದು ಅವರು ಹೇಳಿದರು. ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಮಮತಾ ಬ್ಯಾನರ್ಜಿಗೆ ಈ ಉಪಚುನಾವಣೆ ಗೆಲುವು ನಿರ್ಣಾಯಕವಾಗಿತ್ತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.