Bhopal: ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡ

Bhopal: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ.

Written by - Zee Kannada News Desk | Last Updated : Nov 9, 2021, 07:24 AM IST
  • ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಬೆಂಕಿ
  • ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‌ನ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ
  • ತೀವ್ರವಾಗಿ ಅಸ್ವಸ್ಥರಾಗಿದ್ದ ಮೂವರು ಮಕ್ಕಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಬೆಂಕಿಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದಾರೆ
Bhopal: ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡ title=
Image courtesy: ANI

ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಬೆಂಕಿ : ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್‌ನ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂಲಗಳ ಪ್ರಕಾರ ಕೆಲವು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಇತ್ತೀಚೆಗಿನ ಮಾಹಿತಿ ಪ್ರಕಾರ, ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ತುಂಬಾ ದುಃಖಕರವಾಗಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.  ರಕ್ಷಣಾ ಕಾರ್ಯಾಚರಣೆ ಚುರುಕಾಗಿತ್ತು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು, ಆದರೆ ದುರದೃಷ್ಟವಶಾತ್ ಈಗಾಗಲೇ ತೀವ್ರವಾಗಿ ಅಸ್ವಸ್ಥರಾಗಿದ್ದ ಮೂವರು ಮಕ್ಕಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಬೆಂಕಿಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದಾರೆ. ಆದರೆ, ಎಷ್ಟು ಮಕ್ಕಳು ಗಾಯಗೊಂಡಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ (Children Ward) ಸಂಭವಿಸಿರುವ ಈ ಬೆಂಕಿ ಅನಾಹುತಕ್ಕೆ ಕಾರಣ ಪತ್ತೆಯಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯ ನಡೆಸಿ ಹಲವರನ್ನು ರಕ್ಷಿಸಿದ್ದಾರೆ. ಅದಾಗ್ಯೂ, ಕೆಲವು ಮಕ್ಕಳು ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್  ಸೂಚಿಸಿದ್ದಾರೆ. ಎಸಿಎಸ್ ಸಾರ್ವಜನಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಮೊಹಮ್ಮದ್ ಸುಲೇಮಾನ್ ತನಿಖೆ ನಡೆಸಲಿದ್ದಾರೆ.

ಈ ಕಮಲಾ ನೆಹರು ಆಸ್ಪತ್ರೆಯು ಮಧ್ಯಪ್ರದೇಶದ (Madhya Pradesh's Kamala Nehru Hospital) ರಾಜಧಾನಿ ಭೋಪಾಲ್‌ನ ಹಮೀಡಿಯಾ ಆಸ್ಪತ್ರೆ ಸಂಕೀರ್ಣದಲ್ಲಿದೆ. ಈ ಹಿಂದೆ ಹಲವು ಮಕ್ಕಳು ಕಟ್ಟಡದಲ್ಲಿ ಸಿಲುಕಿರುವ ಭಯವಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಉಪಸ್ಥಿತರಿದ್ದರು.

ಇದನ್ನೂ ಓದಿ- Packaging Rules in India:ಹಾಲು, ಚಹಾ, ಬಿಸ್ಕಿಟ್, ಖಾದ್ಯ ತೈಲಗಳ ಬೆಲೆ ಕುರಿತು ಹೊಸ ನಿಯಮ ಏಪ್ರಿಲ್ 1, 2022ರಿಂದ ಜಾರಿ

ಅಗ್ನಿ ಅವಘಡದ ಬಗ್ಗೆ ಮಾಹಿತಿ ಪಡೆದ ಸಚಿವ ವಿಶ್ವಾಸ್ ಸಾರಂಗ್ ಮತ್ತು ಡಿಐಜಿ ಇರ್ಷಾದ್ ವಾಲಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಗೆ ವೈದ್ಯರ ತಂಡವನ್ನು ಕರೆಸಲಾಗಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಮಕ್ಕಳ ವಿಭಾಗದಲ್ಲಿ ಈ ಅನಾಹುತ ಸಂಭವಿಸಿದೆ. ಅದೇ ಸಮಯದಲ್ಲಿ, ಕಮಲಾ ನೆಹರೂ ಆಸ್ಪತ್ರೆಯ ಹೊರಗೆ ಕಾಯುತ್ತಿರುವ ಅನೇಕ ಮಕ್ಕಳ ಪೋಷಕರು ಮಾತನಾಡಿ, ನಮ್ಮ ಮಕ್ಕಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ, 3-4 ಗಂಟೆಗಳು ಕಳೆದಿವೆ ಎಂದು ಅಳಲು ತೋಡಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಮಕ್ಕಳ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಸುಮಾರು 150 ಮಕ್ಕಳು ದಾಖಲಾಗಿದ್ದರು ಎಂದು ಹೇಳಲಾಗುತ್ತಿದೆ.

ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ತುಂಬಾ ದುಃಖ ತಂದಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಟ್ವೀಟ್ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕಾಗಿತ್ತು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು, ಆದರೆ ದುರದೃಷ್ಟವಶಾತ್ ಈಗಾಗಲೇ ತೀವ್ರವಾಗಿ ಅಸ್ವಸ್ಥರಾಗಿದ್ದ ಮೂವರು ಮಕ್ಕಳನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ- ಬಿಜೆಪಿಯವರಂತಹ ಜಾತಿವಾದಿಗಳು ಬೇರಾರು ಇಲ್ಲ- ಸಿದ್ಧರಾಮಯ್ಯ

ಇದರ ಬೆನ್ನಲ್ಲೇ ಇನ್ನೊಂದು ಟ್ವೀಟ್ ಮಾಡಿರುವ ಅವರು ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಕ್ಕಳು ಅಕಾಲಿಕವಾಗಿ ಇಹಲೋಕ ತ್ಯಜಿಸಿರುವುದು ಸಹಿಸಲಾಗದ ನೋವು. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ಮಕ್ಕಳ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ, ಇದು ನನ್ನ ಹಾರೈಕೆ ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News