ನವದೆಹಲಿ: ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಶನಿವಾರ ಹರಿಯಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ನೇಮಿಸಲಾಯಿತು.


COMMERCIAL BREAK
SCROLL TO CONTINUE READING

ಸಿಎಲ್‌ಪಿ ನಾಯಕರಾಗಿ ನೇಮಕಗೊಳ್ಳುವ ಮೂಲಕ ಹೂಡಾ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಲಿದ್ದಾರೆ ಎನ್ನಲಾಗಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಎಐಸಿಸಿ ಹರಿಯಾಣ ಉಸ್ತುವಾರಿ ಗುಲಾಮ್ ನಬಿ ಆಜಾದ್  ಅವರು ಇಂದು ಹೂಡಾ ಆಯ್ಕೆಯನ್ನು ಪ್ರಕಟಿಸಿದ್ದಾರೆ.ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹುಡಾ ಅವರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಆಜಾದ್, ಅವರು ಅಲ್ಪಾವಧಿಯ ಹೊರತಾಗಿಯೂ, ಮತದಾನದಲ್ಲಿ ಪಕ್ಷದ ಉತ್ತಮ ಪ್ರದರ್ಶನವನ್ನು ಖಚಿತಪಡಿಸಿದ್ದಾರೆ ಎಂದು ಹೇಳಿದರು.


ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕಾಂಗ ಪಕ್ಷದ ನಾಯಕರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಆಯ್ಕೆ ಮಾಡುವ ನಿರ್ಧಾರವನ್ನು ಬಿಟ್ಟಿದ್ದರು. ಶುಕ್ರವಾರದಂದು ನೂತನವಾಗಿ ಆಯ್ಕೆಯಾದ ಶಾಸಕರ ಮೊದಲ ಸಭೆ ಚಂಡೀಗಡದ ಸೆಕ್ಟರ್ 9 ರಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಜ್ಯ ಅಧ್ಯಕ್ಷ ಮತ್ತು ಸಂಸದೆ ಕುಮಾರಿ ಸೆಲ್ಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 


ಇತ್ತೀಚೆಗೆ ಮುಕ್ತಾಯಗೊಂಡ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 90 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಗೆದ್ದರೆ, ಜೆಜೆಪಿ ತನ್ನ ಮೊದಲ ಚುನಾವಣೆಯಲ್ಲಿ 10 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ರಾಜ್ಯದಲ್ಲಿ 31 ಸ್ಥಾನಗಳನ್ನು ಗೆದ್ದಿದೆ. ಹರಿಯಾಣ ಲೋಖಿತ್ ಪಕ್ಷದ ಗೋಪಾಲ್ ಕಂದ ಸೇರಿದಂತೆ ಎಂಟು ಸ್ಥಾನಗಳು ಸ್ವತಂತ್ರರ ಪಾಲಾಗಿವೆ. ಅಕ್ಟೋಬರ್ 27ರಂದು ಮನೋಹರ್ ಲಾಲ್ ಖಟ್ಟರ್ ಅವರು ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದುಶ್ಯಂತ್ ಚೌತಾಲಾ (31) ನೇತೃತ್ವದಲ್ಲಿ ನೂತನವಾಗಿ ರಚನೆಯಾದ ಜನ್ನಾಯಕ್ ಜಂತ ಪಕ್ಷ (ಜೆಜೆಪಿ)ದ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ರಚಿಸಿತು.