Baramulla Encounter : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಲಾಗಿದೆ. ಈ ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ನೊಬ್ಬ  ಹುತಾತ್ಮರಾಗಿದ್ದರು. ಹತ್ಯೆಗೀಡಾದ ಮೂವರು ಉಗ್ರರು ಪಾಕಿಸ್ತಾನದವರಾಗಿದ್ದಾರೆ. ಉಗ್ರರಿಂದ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕರೇರಿ ಪ್ರದೇಶದಲ್ಲಿ ಬುಧವಾರ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಸಹ ಹುತಾತ್ಮರಾಗಿದ್ದಾರೆ.


ಇದನ್ನೂ ಓದಿ : Watch: ರಾಹುಲ್ ಗಾಂಧಿಗೆ ಕೌಂಟರ್ ನೀಡಿದ ಭಾರತೀಯ ಅಧಿಕಾರಿ.!


ಈ ಕುರಿತು ಕಾಶ್ಮೀರ ಪೊಲೀಸ್ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ 'ಮೂರು ಪಾಕಿಸ್ತಾನಿ ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಲಾಗಿದೆ. ಈ ಸಮಯದಲ್ಲಿ, ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಒಬ್ಬರು ಕೂಡ ಹುತಾತ್ಮರಾಗಿದ್ದಾರೆ. ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಿಚಾರದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.