ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ (Jammu-Kashmir) ಪುಲ್ವಾಮಾದಲ್ಲಿ ಶನಿವಾರ ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ (Security Forces) ನಡುವೆ ಎನ್‌ಕೌಂಟರ್‌ ನಡೆದಿದ್ದು, ಇದರಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ಲಭ್ಯವಾಗಿದೆ.


COMMERCIAL BREAK
SCROLL TO CONTINUE READING

ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ:
ಘಟನೆ ಕುರಿತಂತೆ ಮಾಹಿತಿ ನೀಡಿರುವ ಕಾಶ್ಮೀರ ವಲಯ ಪೊಲೀಸರು, ದಾಚಿಗಮ್ ಅರಣ್ಯದ ಬಳಿ ಈ ಎನ್‌ಕೌಂಟರ್‌ (Encounter) ನಡೆದಿದೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಆದರೆ ಇನ್ನೂ ಕೂಡ ಅವರ ಗುರುತು ಪತ್ತೆಯಾಗಿಲ್ಲ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ- Haryana Govt : ಹಸುಗಳ ರಕ್ಷಣೆಗೆ 'ಸ್ಪೆಷಲ್ ಟಾಸ್ಕ್ ಫೋರ್ಸ್' ನೇಮಕ ಮಾಡಿದ ಸರ್ಕಾರ


ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತಲುಪಿದ ಭದ್ರತಾ ಪಡೆಗಳು, ಆ ಪ್ರದೇಶವನ್ನು ಸುತ್ತುವರಿದಿದ್ದು ಭಯೋತ್ಪಾದಕರನ್ನು (Terrorists) ಶರಣಾಗುವಂತೆ ಕೇಳಿದವು. ಆದರೆ ಭದ್ರತಾ ಪಡೆಗಳ ಮನವಿಗೆ ಕಿವಿಗೊಡದ ಭಯೋತ್ಪಾದಕರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿವೆ. ಇದರ ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದವು ಎಂದು ತಿಳಿದು ಬಂದಿದೆ.


ಗಮನಿಸಬೇಕಾದ ಸಂಗತಿಯೆಂದರೆ ಕಣಿವೆಯಲ್ಲಿ ನಡೆಯುತ್ತಿರುವ ಶಾಂತಿ ಮತ್ತು ಸರ್ವತೋಮುಖ ಅಭಿವೃದ್ಧಿಯಿಂದ ಭಯೋತ್ಪಾದಕರು ದಿಗ್ಭ್ರಮೆಗೊಂಡಿದ್ದಾರೆ. ಹೀಗಾಗಿ ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಅವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ ಭದ್ರತಾ ಪಡೆಗಳು ಅವರ ಪ್ರತಿ ಸಂಚನ್ನು ವಿಫಲಗೊಳಿಸುತ್ತಿವೆ.


ಇದನ್ನೂ ಓದಿ- Corona Vaccination Latest Update: ಸೂರಿಲ್ಲದ ಭಿಕ್ಷುಕರ Vaccinationಗಾಗಿ ಕೇಂದ್ರ ಸರ್ಕಾರದ ಪ್ಲಾನ್, ರಾಜ್ಯಗಳಿಗೆ ಹೇಳಿದ್ದೇನು?


ಇದಕ್ಕೂ ಮೊದಲು ಜುಲೈ 24 ರಂದು ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಶೋಕಬಾಬಾ ಅರಣ್ಯದಲ್ಲಿ ಈ ಎನ್ಕೌಂಟರ್ ನಡೆದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ