ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ 2ನೇ ಅವಧಿಯ ಮೊದಲನೆಯ ಸಚಿವ ಸಂಪುಟ ಪುನರ್​ರಚನೆಯಾಗಿದ್ದು, ರಾಜ್ಯದ ನಾಲ್ವರು ಸಂಸದರಿಗೆ ಮಂತ್ರಿ ಭಾಗ್ಯ ಒಲಿದು ಬಂದಿದೆ.


COMMERCIAL BREAK
SCROLL TO CONTINUE READING

ಬಹುನಿರೀಕ್ಷಿತ ಕೇಂದ್ರ ಸಂಪುಟ ವಿಸ್ತರಣೆ(Cabinet Reshuffle)ಯಲ್ಲಿ ಉಡುಪಿ-​ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಕರ್ನಾಟದಕ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಚಿತ್ರದುರ್ಗ ಸಂಸದ ವಿ.ನಾರಾಯಣಸ್ವಾಮಿ ಹಾಗೂ ಬೀದರ್ ಸಂಸದ ಭಗವಂತ ಖೂಬಾ ಸ್ಥಾನ ಪಡೆದುಕೊಂಡಿದ್ದಾರೆ.


ಇದನ್ನೂ ಓದಿ:  PM Kisan ರೈತರಿಗೆ ಸಿಹಿ ಸುದ್ದಿ : ನಿಮ್ಮ ಖಾತೆಗೆ ಬರಲಿದೆ ₹6,000 : ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು


ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಅನೇಕ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.