ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ , 18 ಜನರ ದುರ್ಮರಣ

ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಅಂತಿಮ ಸಂಸ್ಕಾರಕ್ಕಾಗಿ ಮೃತದೇಹವನ್ನು ಸಾಗಿಸುತ್ತಿದ್ದ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ 18 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ.  

Written by - Ranjitha R K | Last Updated : Nov 28, 2021, 10:48 AM IST
  • ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತ
  • ಘಟನೆಯಲ್ಲಿ 18 ಮಂದಿ ಸಾವು
  • 22 ಮಂದಿಗೆ ಗಾಯ
ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ , 18 ಜನರ ದುರ್ಮರಣ  title=
road accident (photo zee news)

ನಾಡಿಯಾ : ಪಶ್ಚಿಮ ಬಂಗಾಳದ (West Bengal) ನಾಡಿಯಾದಲ್ಲಿ ಭೀಕರ ಅಪಘಾತ (Terrible Accident)  ಸಂಭವಿಸಿದೆ. ಇಲ್ಲಿ ಅಂತ್ಯಕ್ರಿಯೆಗೆ (Last Rites)  ಮೃತದೇಹ ತೆಗೆದುಕೊಂಡು ಹೋಗುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ 18 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ.

40 ಜನರಿದ್ದ ವಾಹನದಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗುತ್ತಿದ್ದರು.  ಈ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್  ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ (Truck accident) ಹೊಡೆಡಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ 16 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆ ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಉಳಿದ ಗಾಯಾಳುಗಳನ್ನೂ ಆಸ್ಪತ್ರೆಗೆ (Hospital)  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ : ರೂಪ ಬದಲಿಸುವ ಮೂಲಕ ವಿನಾಶವನ್ನುಂಟು ಮಾಡುತ್ತಿರುವ ಕೊರೊನಾ ವೈರಸ್!: ಕೇಂದ್ರದ ಸಿದ್ಧತೆ ಹೇಗಿದೆ..?

ನಾಡಿಯಾದಲ್ಲಿ ಸಂಭವಿಸಿದ ಅಪಘಾತದ ನಂತರ, ಆಕ್ರೋಶ ವ್ಯಕ್ತವಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.  

ಇದನ್ನೂ ಓದಿ : IMD Alert For Heavy Rainfall: 8 ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News