ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತ, ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಶಾಸಕ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನ ಮತ್ತೊಬ್ಬ ಶಾಸಕರು ಉಪಚುನಾವಣೆಗೆ ಮೊದಲು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದರು.

Last Updated : Oct 25, 2020, 02:40 PM IST
  • ಮಧ್ಯಪ್ರದೇಶದಲ್ಲಿ ಮತ್ತೊಬ್ಬ ಕಾಂಗ್ರೆಸ್ ಶಾಸಕನ ರಾಜೀನಾಮೆ
  • ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಶಾಸಕ
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತ, ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಶಾಸಕ

ಭೋಪಾಲ್: ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಉಪಚುನಾವಣೆಯು ಬಿಜೆಪಿ ಮತ್ತು ಕಾಂಗ್ರೆಸ್ (Congress) ಅಧಿಕಾರವನ್ನು ನಿರ್ಧರಿಸುತ್ತದೆ. ಸಂಪೂರ್ಣ ಬಹುಮತ ಪಡೆಯಲು ಶಿವರಾಜ್ ಸರ್ಕಾರ 9 ಸ್ಥಾನಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ಅಲ್ಲದೆ, ಕಾಂಗ್ರೆಸ್ ಸಂಪೂರ್ಣ ಬಹುಮತದ ಸರ್ಕಾರವನ್ನು ರಚಿಸಲು ಎಲ್ಲಾ ಸ್ಥಾನಗಳನ್ನು ಗೆಲ್ಲುವುದು ಅವಶ್ಯಕ. ಆದರೆ ಕಾಂಗ್ರೆಸ್‌ನ ಸಂಕಷ್ಟ ಕಡಿಮೆಯಾದಂತೆ ಕಾಣುತ್ತಿಲ್ಲ. ಪಕ್ಷದ ಮತ್ತೊಬ್ಬ ಶಾಸಕನ ರಾಜೀನಾಮೆಯಿಂದಾಗಿ ಕಾಂಗ್ರೆಸ್ ದೊಡ್ಡ ಹಿನ್ನಡೆ ಅನುಭವಿಸಿದೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜೀನಾಮೆ:
ಮಧ್ಯಪ್ರದೇಶದಲ್ಲಿ (Madhya Pradesh) ಕಾಂಗ್ರೆಸ್‌ನ ಮತ್ತೊಬ್ಬ ಶಾಸಕರು ಉಪಚುನಾವಣೆಗೆ ಮೊದಲು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದರು. ದಮೋಹ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಹುಲ್ ಸಿಂಗ್ ಭಾನುವಾರ ಸ್ಪೀಕರ್ ರಾಮೇಶ್ವರ್ ಶರ್ಮಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.

ಮೊದಲ ಬಾರಿಗೆ ಶಾಸಕರಾಗಿದ್ದ ರಾಹುಲ್:
ವಿಶೇಷವೆಂದರೆ ಕಾಂಗ್ರೆಸ್ ಶಾಸಕ (Congress MLA) ರಾಹುಲ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ಪ್ರೊಟೆಮ್ ಸ್ಪೀಕರ್ ರಾಮೇಶ್ವರ್ ಶರ್ಮಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ಇದರೊಂದಿಗೆ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಮತ್ತೊಂದು ಸ್ಥಾನವು ಖಾಲಿಯಾಗಿದೆ. ರಾಹುಲ್ ಸಿಂಗ್ ಮೊದಲ ಬಾರಿಗೆ ಗೆಲ್ಲುವ ಮೂಲಕ ಶಾಸಕರಾದರು ಆದರೆ ಒಂದೂವರೆ ವರ್ಷದ ನಂತರವೇ ಅವರು ಶಾಸಕ ಹುದ್ದೆಗೆ ರಾಜೀನಾಮೆ ನೀಡಿದರು.

ಮಧ್ಯಪ್ರದೇಶದಲ್ಲಿ 35 ಲಕ್ಷ ರೂ. ಮೌಲ್ಯದ ಮೂರು ವಜ್ರಗಳನ್ನು ಪತ್ತೆ ಹಚ್ಚಿದ ಕಾರ್ಮಿಕ..!

ಮಧ್ಯಪ್ರದೇಶದ 28 ಕ್ಷೇತ್ರಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ನವೆಂಬರ್ 3 ರಂದು ಮಧ್ಯಪ್ರದೇಶದ 28 ವಿಧಾನಸಭಾ ಸ್ಥಾನಗಳ ಉಪಚುನಾವಣೆಗೆ ಮತದಾನ ನಡೆಯಲಿದೆ.

More Stories

Trending News