Pulwama Encounter: ಪುಲ್ವಾಮಾದಲ್ಲಿ ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಕೊಂದಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Written by - Zee Kannada News Desk | Last Updated : Jul 14, 2021, 09:55 AM IST
  • ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್‌ಕೌಂಟರ್‌ ನಡೆಯುತ್ತಿದೆ
  • ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹೊಡೆದುರುಳಿಸಿವೆ
  • ಈ ಪ್ರದೇಶದಲ್ಲಿ ಇನ್ನೂ ಕೆಲವು ಭಯೋತ್ಪಾದಕರು ಅಡಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ
Pulwama Encounter: ಪುಲ್ವಾಮಾದಲ್ಲಿ ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರ ಹತ್ಯೆ title=
Image courtesy: ANI

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪುಲ್ವಾಮಾದಲ್ಲಿ (Pulwama) ಭದ್ರತಾ ಪಡೆಗಳು ಉತ್ತಮ ಯಶಸ್ಸನ್ನು ಗಳಿಸಿದ್ದು, ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಸೇರಿದಂತೆ  ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭದ್ರತಾ ಪಡೆಗಳು ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.

ಪುಲ್ವಾಮಾದಲ್ಲಿ ತಡರಾತ್ರಿ ಎನ್‌ಕೌಂಟರ್‌ ಆರಂಭವಾಯಿತು:
ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ (Pulwama) ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ (ಜುಲೈ 13) ತಡರಾತ್ರಿ ಎನ್‌ಕೌಂಟರ್‌ ಪ್ರಾರಂಭವಾಯಿತು. ಎನ್‌ಕೌಂಟರ್‌ನಲ್ಲಿ ಈವರೆಗೂ ಮೂವರು ಉಗ್ರರನ್ನು ಹತ್ಯೆಗೈಯಲಾಗಿದ್ದು ಇನ್ನೂ ಕೆಲವು ಭಯೋತ್ಪಾದಕರು ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ- Jammu-Kashmir: ಕಾಶ್ಮೀರದಲ್ಲಿ ಮುಂದುವರೆದ ಆಪರೇಷನ್ ಆಲ್ ಔಟ್, 36 ಗಂಟೆಗಳಲ್ಲಿ 7 ಉಗ್ರರ ಹತ್ಯೆ

ಮಂಗಳವಾರ, ಜಿಲ್ಲಾ ಆಸ್ಪತ್ರೆಯ ಬಳಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಇದರ ನಂತರ ಭಯೋತ್ಪಾದಕರು ಗುಂಡು ಹಾರಿಸಲಾರಂಭಿಸಿದರು ಮತ್ತು ನಂತರ ಭದ್ರತಾ ಪಡೆಗಳೂ ಪ್ರತೀಕಾರ ತೀರಿಸಿಕೊಂಡರು ಎಂದು ವರದಿಯಾಗಿದೆ.

ಲಷ್ಕರ್ ಕಮಾಂಡರ್ ಅಬು ಹುರೈರಾ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟರು:
ಎನ್‌ಕೌಂಟರ್‌ನಲ್ಲಿ (Encounter) ಸಾವನ್ನಪ್ಪಿದ ಭಯೋತ್ಪಾದಕರಲ್ಲಿ ಪಾಕಿಸ್ತಾನದ ನಿವಾಸಿ ಲಷ್ಕರ್ ಕಮಾಂಡರ್ ಎಜಾಜ್ ಅಲಿಯಾಸ್ ಅಬು ಹುರೈರಾ ಕೂಡ ಸೇರಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಇದಲ್ಲದೆ, ಭದ್ರತಾ ಪಡೆಗಳು ಇಬ್ಬರು ಸ್ಥಳೀಯ ಭಯೋತ್ಪಾದಕರನ್ನು ಸಹ ಕೊಂದಿದ್ದಾರೆ, ಅವರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ.

ಇದನ್ನೂ ಓದಿ-  Jammu-Kashmir: ಜಮ್ಮು ಕಾಶ್ಮೀರದ ವಿವಿಧೆಡೆ NIA ದಾಳಿ : ಐದು ಜನ ಆರೋಪಿಗಳ ಬಂಧನ

ಜುಲೈ 8 ರಂದು ಪುಲ್ವಾಮಾದಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಗೈಯಲಾಯಿತು:
ಇದಕ್ಕೂ ಮೊದಲು ಜುಲೈ 8 ರಂದು ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದರು. ಅದೇ ದಿನ, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಸಹ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಿಫಾಯತ್ ರಂಜಾನ್ ಸೋಫಿ ಮತ್ತು ಅಲ್ ಬದ್ರ್‌ನ ಇನಾಯತ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News