Big Tragedy: ನಕಲಿ ಮದ್ಯ ಸೇವಿಸಿ 16 ಮಂದಿ ಸಾವು, ಪೊಲೀಸರಿಂದ ತನಿಖೆ

ನಕಲಿ ಮದ್ಯ ಸೇವಿಸಿ ಕಳೆದೆರಡು ದಿನಗಳಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ.

Written by - Zee Kannada News Desk | Last Updated : Jul 17, 2021, 05:58 PM IST
  • ಪಶ್ಚಿಮ ಚಂಪಾರನ್ ಜಿಲ್ಲೆಯ ಲೌರಿಯಾ ಬ್ಲಾಕ್‌ನ ಕೆಲ ಹಳ್ಳಿಗಳಲ್ಲಿ ನಕಲಿ ಮದ್ಯ ಸೇವನೆ
  • ಕಳೆದೆರಡು ದಿನಗಳಲ್ಲಿ 16 ಮಂದಿ ಸಾವು, ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಅನೇಕರ ನರಳಾಟ
  • ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ವಾಗ್ದಾಳಿ
Big Tragedy: ನಕಲಿ ಮದ್ಯ ಸೇವಿಸಿ 16 ಮಂದಿ ಸಾವು, ಪೊಲೀಸರಿಂದ ತನಿಖೆ  title=
ನಕಲಿ ಮದ್ಯ ಸೇವಿಸಿ 16 ಮಂದಿ ಬಲಿ

ಬಿಹಾರ: ನಕಲಿ ಮದ್ಯ ಸೇವಿಸಿ 16 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ  ಚಂಪಾರನ್‌ನಲ್ಲಿ ನಡೆದಿದೆ. ಪಶ್ಚಿಮ ಚಂಪಾರನ್ ಜಿಲ್ಲೆಯ ಲೌರಿಯಾ ಬ್ಲಾಕ್‌ನ ಕೆಲವು ಹಳ್ಳಿಗಳಲ್ಲಿ ನಕಲಿ ಮದ್ಯ ಸೇವಿಸಿ ಕಳೆದೆರಡು ದಿನಗಳಲ್ಲಿ 16 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

‘ಘಟನೆಯ ಪರಿಸ್ಥಿತಿಯನ್ನು ಬಿಹಾರ ಸರ್ಕಾರ(Bihar Governement) ಮೇಲ್ವಿಚಾರಣೆ ಮಾಡುತ್ತಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡ ಇದರ ಮೇಲೆ ಕೆಲಸ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಉಪಮುಖ್ಯಮಂತ್ರಿ ರೇಣುದೇವಿ ಹೇಳಿದ್ದಾರೆ.

ಇದನ್ನೂ ಓದಿ: Good Offer: 10ನೇ ಕ್ಲಾಸ್ ಫೇಲ್ ಆದವರಿಗೆ ಉಚಿತ ಕೊಡೈಕೆನಾಲ್ ಟ್ರಿಪ್..!

ಲೌರಿಯಾ ಬ್ಲಾಕ್‌ನ ಕೆಲವು ಹಳ್ಳಿಗಳಲ್ಲಿ ನಕಲಿ ಮದ್ಯ(Spurious Liquor) ಸೇವಿಸಿ ಅನೇಕರು ಸಾವನ್ನಪ್ಪಿರುವ ಬಗ್ಗೆ ನಾವು ಮಾಹಿತಿ ಪಡೆದುಕೊಂಡಿದ್ದೇವೆ. ಈಗಾಗಲೇ ವೈದ್ಯಕೀಯ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಘಟನೆಯ ಸತ್ಯಾಂಶ ತಿಳಿದುಬರಲಿದೆ ಎಂದು ಪಶ್ಚಿಮ ಚಂಪಾರನ್ ಜಿಲ್ಲಾಧಿಕಾರಿ ಕುಂದನ್ ಕುಮಾರ್ ಹೇಳಿದ್ದಾರೆ.  

ಇದುವರೆಗೆ ಸಾವನ್ನಪ್ಪಿರುವವರ 16 ಜನರ ಪೈಕಿ 8 ಜನರ ಕುಟುಂಬಸ್ಥರು ಮದ್ಯ ಸೇವನೆಯ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಬಗ್ಗೆ ತನಿಖೆ ನಡೆದು ವರದಿ ಬಂದ ಬಳಿಕ ನಮಗೆ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ ಇಬ್ಬರು ಗ್ರಾಮ ಚೌಕಿದಾರಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಡಳಿತವು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ಬಿಹಾರ(Bihar)ದಲ್ಲಿ 2016ರಿಂದಲೂ ಮದ್ಯ ಸೇವನೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Passport: ಪಾಸ್‌ಪೋರ್ಟ್ ಮಾಡಿಸಲು ಬೇಕಾಗುವ ಅಗತ್ಯ ದಾಖಲೆಗಳಿವು

ನಕಲಿ ಮದ್ಯ ಸೇವಿಸಿ ಅನೇಕರು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಸಾವಿಗೆ ನಿಖರ ಕಾರಣವೇನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಈಗಾಗಲೇ ಈ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು, ಶೀಘ್ರವೇ ನಿಜಾಂಶ ತಿಳಿಯಲಿದೆ ಎಂದು ಚಂಪಾರನ್(Champaran) ಜಿಲ್ಲೆಯ ಡಿಐಜಿ ಲಾಲನ್ ಮೋಹನ್ ಪ್ರಸಾದ್ ಹೇಳಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್(Lalu Prasad Yadav), ಪ್ರತಿವರ್ಷ ನಕಲಿ ಮದ್ಯ ಸೇವಿಸಿ ಸಾವಿರಾರು ಜನರು ಸಾವನ್ನಪ್ಪುತ್ತಿದ್ದಾರೆ. ನಿತೀಶ್ ಕುಮಾರ್ ಅವರ ‘ಉತ್ತಮ ಆಡಳಿತ’ದಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News