Narendra Singh Tomar: ರೈತರನ್ನು ಆರ್ಥಿಕವಾಗಿ ಬಲಪಡಿಸಲು ಕೇಂದ್ರದ ಮೋದಿ ಸರ್ಕಾರವು ನಿರಂತರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ನಿಧಿಯಿಂದ ದೇಶದ ಕೋಟಿಗಟ್ಟಲೆ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಇದಲ್ಲದೇ ರೈತರ ಅಭ್ಯುದಯಕ್ಕಾಗಿ ಹಲವು ರಾಜ್ಯಗಳು ವಿವಿಧ ಯೋಜನೆಗಳನ್ನು ನಡೆಸುತ್ತಿವೆ. ರೈತರನ್ನು ಆರ್ಥಿಕವಾಗಿ ಮತ್ತಷ್ಟು ಬಲಪಡಿಸುವ ಸಲುವಾಗಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೇಂದ್ರಾಡಳಿತ ಪ್ರದೇಶಗಳಿಗೆ (UTs) PM-KISAN ಸೇರಿದಂತೆ ಎಲ್ಲಾ ಕೇಂದ್ರೀಯ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಜಾರಿಗೆ ತರುವಂತೆ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IPLನ ಈ ತಂಡಕ್ಕೆ ಹೊರೆಯಾದ ಟೀಂ ಇಂಡಿಯಾದ ಸ್ಟಾರ್ ಆಟಗಾರ: ತಂಡದಿಂದ ಒತ್ತಾಯವಾಗಿ ಹೊರಹಾಕಲ್ಪಟ್ಟರೇ?


ರೈತರು ಎಲ್ಲಾ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.


ತೋಮರ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಉದ್ದೇಶಕ್ಕಾಗಿ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಪ್ರಧಾನಿ ಮೋದಿ ಅವರು ಸಂಪೂರ್ಣ ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ತೋಮರ್ ಹೇಳಿದರು.


ಕೇಂದ್ರಾಡಳಿತ ಪ್ರದೇಶಗಳಲ್ಲೂ ಸರಕಾರದ ಈ ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನಗೊಳಿಸಬೇಕು. ಅಲ್ಲಿನ ಎಲ್ಲ ರೈತರಿಗೂ ಕಲ್ಯಾಣ ಯೋಜನೆಗಳ ಲಾಭ ಸಿಗಬೇಕು. ಎಲ್ಲಾ ಅರ್ಹ ರೈತರು, ಪಶುಸಂಗೋಪನೆ ಮತ್ತು ಮೀನುಗಾರರು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಸೇರಿದಂತೆ ಇತರ ಯೋಜನೆಗಳ ಪ್ರಯೋಜನವನ್ನು ಪಡೆಯಬೇಕು ಎಂದು ಕೇಂದ್ರ ಸಚಿವರು ಹೇಳಿದರು.


ಇದನ್ನೂ ಓದಿ: Shani-Chandra Yuti: ಶನಿ-ಚಂದ್ರ ವಿಷಯೋಗ: ಈ 3 ರಾಶಿಯವರಿಗೆ ಸಂಕಷ್ಟಗಳ ಸರಮಾಲೆ; ಪರಿ ಪರಿಯಾಗಿ ಕಾಡುವನು ಶನಿದೇವ!


“ಅಭಿವೃದ್ಧಿಯ ಓಟದಲ್ಲಿ ಇತರ ರಾಜ್ಯಗಳ ಜತೆಗೆ ಈ ಪ್ರದೇಶಗಳೂ ಮುಂದಿರಬೇಕು. ಕೇಂದ್ರಾಡಳಿತ ಪ್ರದೇಶಗಳ ಸಣ್ಣ ರೈತರ ಜೀವನಶೈಲಿಯಲ್ಲಿಯೂ ಬದಲಾವಣೆಯಾಗಬೇಕು. ಕೇಂದ್ರ ಸರ್ಕಾರದ ಬಳಿ ಯಾವುದೇ ಯೋಜನೆಗಳು ಮತ್ತು ಹಣದ ಕೊರತೆ ಇಲ್ಲ, ಯೋಜನೆಗಳ ಸಂಪೂರ್ಣ ಅನುಷ್ಠಾನದ ಅಗತ್ಯವಿದೆ” ಎಂದು ಸಚಿವರು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw