ನವದೆಹಲಿ: ಭಾರಿ ಮಳೆಯ ನಂತರ ಬಿಹಾರದ ಪಾಟ್ನಾದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಕಾರಣ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ದೂರಿದ್ದಾರೆ. 


COMMERCIAL BREAK
SCROLL TO CONTINUE READING

ಪ್ರವಾಹದಿಂದ ಉಂಟಾದ ಈ ಸ್ಥಿತಿಗೆ ರಾಜ್ಯ ಸರ್ಕಾರಿ ಅಧಿಕಾರಿಗಳು ಕಾರಣ ಎಂದು ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ' ಐಎಂಡಿ ಮತ್ತು ಹವಾಮಾನ ಇಲಾಖೆ ಕಚೇರಿಯ ಮುನ್ಸೂಚನೆ, ಇದ್ದರೆ, ಅಧಿಕಾರಿಗಳೇಕೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ? ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.


ಇದೇ ವೇಳೆ ಅವರು ಪರಿಹಾರ ವಿತರಣೆ ಎಲ್ಲಾ ಪ್ರವಾಹ ಪೀಡಿತರಿಗೆ ಇರಬೇಕು ಮತ್ತು ಯಾವುದೇ ತಾರತಮ್ಯ ಇರಬಾರದು ಎಂದು ಮನವಿ ಮಾಡಿಕೊಂಡರು. ಇದಕ್ಕೂ ಮೊದಲು ಅವರು ನಿತೀಶ್ ಕುಮಾರ್ ಪ್ರವಾಹವನ್ನು ಸರಿಯಾಗಿ ನಿರ್ವಹಿಸಲಿಲ್ಲ ಎಂದು ಆರೋಪಿಸಿದ್ದರು. 


ಇತ್ತೀಚಿಗೆ ಬಿಹಾರದ ರಾಜಧಾನಿ ಪಾಟ್ನಾ ಸೇರಿದಂತೆ ಹಲವಾರು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು.