ಪಾಟ್ನಾ: ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಬಿಹಾರ ಮುಖ್ಯಮಂತ್ರಿಯ ಪ್ರತಿನಿಧಿಗಳು ನಿತೀಶ್ ಕುಮಾರ್ ಪರವಾಗಿ ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಚುನಾವಣಾ ಅಧಿಕಾರಿ ಅನಿಲ್ ಹೆಗ್ಡೆ ಅವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಬಿಹಾರದಲ್ಲಿ ತೀವ್ರ ಪ್ರವಾಹದಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳು ನಡೆಸುತ್ತಿರುವ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಹಿನ್ನೆಲೆಯಲ್ಲಿ ಸಿಎಂ ನಿತೀಶ್ ಕುಮಾರ್ ರಾಜ್ಯದಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ.


ಜೆಡಿಯು ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಜೆಡಿಯು ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಶನಿವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. 


ಅಕ್ಟೋಬರ್ 6 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 19 ರಂದು ರಾಜ್‌ಗೀರ್‌ನಲ್ಲಿ ನಡೆಯಲಿರುವ ಪಕ್ಷದ ಎರಡು ದಿನಗಳ ಅಧಿವೇಶನದಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು.