ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ಒಂದು ವಾರವು ಕಳೆದಿಲ್ಲ. ಆದ್ರೆ, ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.
ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರಿಂದ ಮೇವಾಲಾಲ್(Mewa Lal Choudhary) ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ನಿತೀಶ್ ಕುಮಾರ್ ಅವರು ತಮ್ಮದೇ ಸಂಪುಟ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಸಂಬಂಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ(RJD) ಪ್ರಶ್ನಿಸಿತ್ತು.
ಮಹಿಳೆಯರಿಗೆ ಶುಭ ಸುದ್ದಿ: ಸತತ 3ನೇ ದಿನವೂ ಭಾರೀ ಇಳಿಕೆ ಕಂಡ ಚಿನ್ನದ ಬೆಲೆ!
ಇನ್ನು RJD ಆರೋಪದ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ಇದೆ ತಿಂಗಳ 16ರಂದು ಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಮೇವಾಲಾಲ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಚರ್ಚಿಸಿದ್ದರು.
CBSE ಬೋರ್ಡ್ ಪರೀಕ್ಷೆಯ ಪಠ್ಯ ಕಡಿಮೆಯಾಗುವ ನಿರೀಕ್ಷೆ, ಪರೀಕ್ಷೆಗಳು ಯಾವಾಗ ಇಲ್ಲಿದೆ ಮಾಹಿತಿ
ಬಿಹಾರದಲ್ಲಿ NDA ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸೋಮವಾರ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.