49 ಗಣ್ಯರ ವಿರುದ್ಧದ ದೇಶದ್ರೋಹ ಪ್ರಕರಣ ಮುಚ್ಚಲು ಬಿಹಾರ ಪೊಲೀಸ್ ನಿರ್ಧಾರ
ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ದೇಶದಲ್ಲಿ ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ಹತ್ಯೆಯನ್ನು ತಕ್ಷಣ ನಿಲ್ಲಿಸಬೇಕೆಂದು ಕೋರಿ ಬಹಿರಂಗ ಪತ್ರ ಬರೆದ 49 ಗಣ್ಯರ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಮುಚ್ಚಲು ಬಿಹಾರ ಪೊಲೀಸರು ನಿರ್ಧರಿಸಿದ್ದಾರೆ.
ನವದೆಹಲಿ: ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ದೇಶದಲ್ಲಿ ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ಹತ್ಯೆಯನ್ನು ತಕ್ಷಣ ನಿಲ್ಲಿಸಬೇಕೆಂದು ಕೋರಿ ಬಹಿರಂಗ ಪತ್ರ ಬರೆದ 49 ಗಣ್ಯರ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಮುಚ್ಚಲು ಬಿಹಾರ ಪೊಲೀಸರು ನಿರ್ಧರಿಸಿದ್ದಾರೆ.
ನಟ ಮತ್ತು ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್, ಲೇಖಕ ರಾಮಚಂದ್ರ ಗುಹಾ ಮತ್ತು ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನೆಗಲ್ ಸೇರಿದಂತೆ ಸೆಲೆಬ್ರಿಟಿಗಳ ವಿರುದ್ಧ ದೇಶದ್ರೋಹ ಪ್ರಕರಣ ಕಳೆದ ವಾರ ದಾಖಲಾಗಿದ್ದು, ಇದಾದ ಈ ನಿರ್ಧಾರಕ್ಕೆ ದೇಶದೆಲ್ಲೆಡೆ ತೀವ್ರ ವಿರೋಧವ್ಯಕ್ತವಾಗಿತ್ತು. ನಟ ಕಮಲ್ ಹಾಸನ್ ಸೇರಿದಂತೆ ಹಲವರು ಪೋಲೀಸರ ನಿರ್ಧಾರವನ್ನು ಖಂಡಿಸಿ ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿದ್ದರು.
ಬಿಹಾರ್ ಪೋಲಿಸ್ ವಕ್ತಾರ ಜಿತೇಂದ್ರ ಕುಮಾರ್ ಮಾತನಾಡಿ 'ಜಿಲ್ಲಾ ಪೊಲೀಸ್ ಮುಖ್ಯಸ್ಥರು ಈ ಪ್ರಕರಣವನ್ನು ದುರುದ್ದೇಶಪೂರಿತ ಸುಳ್ಳು ಎಂದು ಹೇಳಿದ್ದಾರೆ ಮತ್ತು ಅರ್ಜಿದಾರರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದ್ದಾರೆ. ಈ ಪ್ರಕರಣವನ್ನು ಕೇವಲ ಪ್ರಚಾರಕ್ಕಾಗಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.
ಈಗ ಎಸ್‌ಎಸ್‌ಪಿ ಪ್ರಕರಣವನ್ನು ಮುಚ್ಚಲು ಪುನಃ ಪ್ರಾರಂಭಿಸಿದೆ ಮತ್ತು ಯಾವುದೇ ಕಾರಣವಿಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಕ್ಕಾಗಿ ದೂರುದಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದರು. ಪ್ರಕರಣದ ತನಿಖಾ ಅಧಿಕಾರಿ ಸ್ಥಳೀಯ ನ್ಯಾಯಾಲಯದಲ್ಲಿ ಒಂದು ಅಥವಾ ಎರಡು ದಿನಗಳಲ್ಲಿ ಈ ವಿಚಾರವಾಗಿ ಅಂತಿಮ ವರದಿಯನ್ನು ಸಲ್ಲಿಸುತ್ತಾರೆ ಎಂದು ಅವರು ಹೇಳಿದರು. ಅರ್ಜಿದಾರರಾದ ಸುಧೀರ್ ಓಜಾ ಅವರು ರಾಮ್‌ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆಂದು ತಿಳಿದುಬಂದಿದೆ. ಪಾಸ್ವಾನ್ ಅವರು ಎನ್‌ಡಿಎಯ ಮಿತ್ರರಾಗಿದ್ದು, ಈ ಪ್ರಕರಣವು ನಿತೀಶ್ ಕುಮಾರ್ ಸರ್ಕಾರಕ್ಕೆ ಮುಜುಗರ ತಂದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.