ಬಿಹಾರದಲ್ಲಿ ಮತ್ತೆ NDA ಸರ್ಕಾರ: ನಿತೀಶ್ ಕುಮಾರ್ ಜೊತೆ ಸಚಿವರಾಗಿ 8 ಮಂದಿ ಪ್ರಮಾಣವಚನ
Bihar Political Crisis: ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್ ಕುಮಾರ್, ́ಮಹಾಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ, ಹೀಗಾಗಿ ನಾನು ಈ ನಿರ್ಧಾರ ಮಾಡಿದ್ದೇನೆ ಅಂತಾ ಹೇಳಿದ್ದಾರೆ. 2022ರ ಆಗಸ್ಟ್ನಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ NDA ಜೊತೆಗಿನ ಮೈತ್ರಿ ಮುರಿದು ಮಹಾಮೈತ್ರಿಕೂಟದೊಂದಿಗೆ ಸರ್ಕಾರ ರಚಿಸಿದ್ದರು. ಇದೀಗ 18 ತಿಂಗಳ ಬಳಿಕ ಮತ್ತೆ ಅವರು NDAಗೆ ಮರಳಿದ್ದಾರೆ.
ನವದೆಹಲಿ: ಬಿಹಾರದಲ್ಲಿ ಮತ್ತೆ NDA ಸರ್ಕಾರ(National Democratic Alliance) ಮರಳಲಿದೆ. ಮಹಾಮೈತ್ರಿಕೂಟದಿಂದ JDU ಬೇರ್ಪಟ್ಟಿದ್ದು, ಬಿಜೆಪಿ ಜತೆಗೂಡಿ ಸರ್ಕಾರ ರಚಿಸಲಿದೆ. ಭಾನುವಾರ ಸಂಜೆ(ಜ.೨೮) ರಾಜಭವನದಲ್ಲಿ ನಿತೀಶ್ ಕುಮಾರ್ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ನಿತೀಶ್ ಕುಮಾರ್ ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳು ಮತ್ತು 6 ಮಂದಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಮತ್ತು ಡಾ.ಪ್ರೇಮ್ ಕುಮಾರ್, JDUನಿಂದ ವಿಜಯ್ ಚೌಧರಿ, ವಿಜೇಂದ್ರ ಯಾದವ್ ಮತ್ತು ಶ್ರವಣ್ ಕುಮಾರ್, HAMನಿಂದ ಜಿತಿನ್ ರಾಮ್ ಮಾಂಝಿ ಪುತ್ರ ಸಂತೋಷ್ ಕುಮಾರ್ ಸುಮನ್ ಮತ್ತು ಸ್ವತಂತ್ರ ಅಭ್ಯರ್ಥಿ ಸುಮಿತ್ ಸಿಂಗ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ : ಭಾರತದ ಪ್ರಥಮ ಸೇನಾ ಮುಖ್ಯಸ್ಥರ ಜೀವನಗಾಥೆ
ಬಿಹಾರ ಬಿಜೆಪಿ ಉಸ್ತುವಾರಿ ವಿನೋದ್ ತಾವ್ಡೆ ಟ್ವೀಟ್ ಮಾಡುವ ಮೂಲಕ, ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ಬೆಂಬಲ ಸೂಚಿಸುತ್ತಿರುವ ಪತ್ರವನ್ನು ಹಸ್ತಾಂತರಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬಿಹಾರದ ಹೊಸ ಸರ್ಕಾರದಲ್ಲಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಭಾನುವಾರ ಬೆಳಗ್ಗೆ JDU ಶಾಸಕಾಂಗ ಸಭೆಯಲ್ಲಿ ನಿತೀಶ್ ಕುಮಾರ್ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು. ಅವರು ರಾಜೀನಾಮೆ ನೀಡಿದ ಕೂಡಲೇ ಬಿಜೆಪಿ ತನ್ನ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿತು. ವಿನೋದ್ ತಾವ್ಡೆ ಅಧ್ಯಕ್ಷತೆಯಲ್ಲಿ ಪಾಟ್ನಾ ಪಕ್ಷದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ನಿತೀಶ್ ಕುಮಾರ್‌ಗೆ ಬೆಂಬಲ ಪತ್ರವನ್ನು ನೀಡಿತು.
ರಾಜಾ ರಾಮಣ್ಣ: ಭಾರತದ ಅಣುಶಕ್ತಿ ಯುಗದ ನಿರ್ಮಾತೃವಿನ ಸ್ಮರಣೆ
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ನಿತೀಶ್ ಕುಮಾರ್, ಮಹಾಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ, ಹೀಗಾಗಿ ನಾನು ಈ ನಿರ್ಧಾರ ಮಾಡಿದ್ದೇನೆ ಅಂತಾ ಹೇಳಿದ್ದಾರೆ. 2022ರ ಆಗಸ್ಟ್ನಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ NDA ಜೊತೆಗಿನ ಮೈತ್ರಿ ಮುರಿದು ಮಹಾಮೈತ್ರಿಕೂಟದೊಂದಿಗೆ ಸರ್ಕಾರವನ್ನು ರಚಿಸಿದ್ದರು. ಇದೀಗ 18 ತಿಂಗಳ ಬಳಿಕ ಮತ್ತೆ ಅವರು NDAಗೆ ಮರಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.