ಭೋಜ್‌ಪುರ್‌: ಯುವಕನೋರ್ವನನ್ನು ಕೊಲೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಉದ್ರಿಕ್ತರ ಗುಂಪೊಂದು ಮಹಿಳೆಯನ್ನು ಥಳಿಸಿ, ನಗ್ನಗೊಳಿಸಿ ಮೆರವಣಿಗೆ ಮಾಡಿದ ಧಾರುಣ ಘಟನೆ ಬಿಹಾರದ ಬಿಹಿಯಾ ಎಂಬಲ್ಲಿ ಸೋಮವಾರ ನಡೆದಿದೆ. 


COMMERCIAL BREAK
SCROLL TO CONTINUE READING

ಬಿಹಿಯಾ ಪ್ರದೇಶದ ರೈಲ್ವೆ ನಿಲ್ದಾಣದ ಬಳಿ ಲೈಂಗಿಕ ಕಾರ್ಯಕರ್ತೆಯರು ಹೆಚ್ಚಾಗಿದ್ದು, 19 ವರ್ಷದ ಯುವಕನೊಬ್ಬ ಆ ಸ್ಥಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇದರಿಂದ ಉದ್ರಿಕ್ತಗೊಂಡ ಜನರ ಗುಂಪೊಂದು ಅಲ್ಲಿ ಸುತ್ತಮುತ್ತಲಿನ ಅಂಗಡಿಗಳಿಗೆ ಬೆಂಕಿಯಿಟ್ಟು ದಾಂಧಲೆ ನಡೆಸಿದ್ದಾರೆ. ಅಲ್ಲದೆ,  ಭಾನುವಾರ ರಾತ್ರಿ ಆತ, ಈ ಮಹಿಳೆಯೊಂದಿಗೆ ಇದ್ದುದನ್ನು ಕಂಡಿದ್ದ ಕೆಲವರು, ಆತನ ಸಾವಿಗೆ ಮಹಿಳೆಯೇ ಕಾರಣ ಎಂದು ಶಂಕಿಸಿ, ಆಕೆಯನ್ನು ಸಾರ್ವಜನಿಕವಾಗಿ ಥಳಿಸಿದ್ದಲ್ಲದೆ, ಆಕೆಯನ್ನು ನಗ್ನಗೊಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ಇದರಿಂದ ಬಿಹಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಬಿಗೆ ಪೋಲಿಸ್ ಭದ್ರತೆ ಒದಗಿಸಲಾಗಿದೆ. 


ಈ ಘಟನೆ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಹಿಂಸಾಚಾರ ಮಿತಿಮೀರುವವರೆಗೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ 8 ಪೋಲಿಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.