ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಮೂವರು ಮುಸ್ಲಿಂ ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

2002ರ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ‘ನಾಚಿಕೆಗೇಡಿನ ನಿರ್ಧಾರ’ ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಗುಜರಾತ್ ಕಾಂಗ್ರೆಸ್‍ನ ಮೂವರು ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮುರಿಗೆ ಪತ್ರ ಬರೆದಿದ್ದಾರೆ. ಮೂವರು ಶಾಸಕರಾದ ಗ್ಯಾಸುದ್ದೀನ್ ಶೇಖ್, ಇಮ್ರಾನ್ ಖೇದವಾಲಾ ಮತ್ತು ಜಾವೇದ್ ಪಿರ್ಜಾದಾ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 7 ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿಅಪರಾಧಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ ಗುಜರಾತ್ ಬಿಜೆಪಿ ಸರ್ಕಾರದ್ದು ‘ನಾಚಿಕೆಗೇಡಿನ ನಿರ್ಧಾರ. ಇಂತಹ ನಿರ್ಧಾರ ತೆಗೆದುಕೊಂಡ ದಿನವನ್ನು ಕಳಂಕಗೊಳಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: PM Kisan New Rule: ಇನ್ಮುಂದೆ ಪತಿ-ಪತ್ನಿ ಇಬ್ಬರ ಖಾತೆಗೂ ರೂ. 6000 ಬರಲಿದೆಯಾ? ಹೊಸ ನಿಯಮ ಏನು ಹೇಳುತ್ತದೆ?


ಕ್ಷಮಾದಾನ ನೀತಿಯಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅತ್ಯಾಚಾರ ಅಪರಾಧಿಗಳನ್ನು ಬಿಡುಗಡೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊಂದಿದ್ದರೂ, ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮೂಲಕ ಗುಜರಾತ್‌ನ ಬಿಜೆಪಿ ಸರ್ಕಾರ ತನ್ನ ಅಸೂಕ್ಷ್ಮತೆ ಪ್ರದರ್ಶಿಸಿದೆ. ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವವರಿಗೆ ಇದು ನಿರಾಶಾದಾಯಕ ನಿರ್ಧಾರ’ ಎಂದು ಪತ್ರದಲ್ಲಿ ಶಾಸಕರು ತಿಳಿಸಿದ್ದಾರೆ.


2002ರ ಗುಜರಾತ್ ಕೋಮುಗಲಭೆಯಲ್ಲಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಗ ಬಾನು ಅವರು 5 ತಿಂಗಳ ಗರ್ಭಿಣಿಯಾಗಿದ್ದರು. ಬಾನು ಅವರ 3 ವರ್ಷದ ಮಗು ಸೇರಿ 7 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಲಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಗುಜರಾತ್‌ನ ಬಿಜೆಪಿ ಸರ್ಕಾರ ಇಂತಹ ಘೋರ ಅಪರಾಧಗಳನ್ನು ಮಾಡಿದವರನ್ನು ಕ್ಷಮಿಸಿದೆ ಎಂದು ಅವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: Sukanya Samriddhi Yojana ಹಾಗೂ PPF ಹೂಡಿಕೆದಾರರಿಗೆ ಸಂತಸದ ಸುದ್ದಿ, ಶೀಘ್ರದಲ್ಲಿಯೇ ಬಡ್ಡಿ ದರ ಹೆಚ್ಚಳ ಸಾಧ್ಯತೆ! ಎಷ್ಟು?


75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಯೇ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ಇದಕ್ಕೆ ವಿರೋಧ ಪಕ್ಷಗಳು ಸೇರಿದಂತೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಗುಜರಾತ್ ಸರ್ಕಾರ ಕೂಡಲೇ ತನ್ನ ಆದೇಶವನ್ನು ಹಿಂಪಡೆದುಕೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಗಳು ಕೇಳಿಬಂದಿವೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.