Maharashtra Governement : ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಂಗಳವಾರ ಮಹಾರಾಷ್ಟ್ರ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದೆ.
ಶೇ. 50 ಮೀಸಲಾತಿ ಮಿತಿಯನ್ನು ಮೀರಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಸ್ತರಿಸಿದೆ ಎಂದು ಮಹಾರಾಷ್ಟ್ರ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಅಂಗೀಕರಿಸಿದ್ದಾರೆ.
ಇದನ್ನು ಓದಿ :Saanya iyer : ಸೀರೆಯಲ್ಲಿ ಪುಟ್ಟಗೌರಿ, ಹಾಟ್ ಫೋಟೋಸ್ ಇಲ್ಲಿವೆ ನೋಡಿ
ಮರಾಠ ಸಮುದಾಯಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮೀಸಲು ನೀಡಬೇಕು ಎಂದು ಕಾರ್ಯಕರ್ತ ಮನೋಜ್ ಜಾರಂಗೆ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಇದು ಸರ್ಕಾರದ ಮೇಲೆ ಒತ್ತಡ ಉಂಟು ಮಾಡಿ ಮಸೂದೆ ಮಂಡಿಸಿ ಅಂಗೀಕರಿಸುವಂತೆ ಮಾಡಿದೆ.
ಇದನ್ನು ಓದಿ : ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಸಬ್-ಇನ್ಸ್’ಪೆಕ್ಟರ್ ಮೇಲೆ ಕ್ರಮ ಕೈಗೊಳ್ಳಬೇಕು: ಬೊಮ್ಮಾಯಿ
ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ 2018 ರಂತೆಯೇ ಇದೆ. ಈ ಮೂಲಕ ದಶಕದಲ್ಲಿ ಮೂರನೇ ಬಾರಿಗೆ ಮರಾಠ ಮೀಸಲು ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮೈತ್ರಿ ಸರ್ಕಾರ ಇಂದು ಅಂಗೀಕರಿಸಿದ ಶೇಕಡಾ 10ರಷ್ಟು ಮರಾಠ ಮೀಸಲಾತಿ ಮಸೂದೆಯು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರ ಸರ್ಕಾರ ಪರಿಚಯಿಸಿದ್ದ ವಿಧೇಯಕವನ್ನೇ ಮುಂದುವರಿಸಲಾಗಿದೆ. ಈ ಮರಾಠ ಮೀಸಲಾತಿ ಮಸೂದೆ ಅಂಗೀಕರಿಸುವ ಸಂಬಂಧ ಮಹಾರಾಷ್ಟ್ರ ಸರ್ಕಾರ ಒಂದು ದಿನದ ವಿಶೇಷ ಅಧಿವೇಶನವನ್ನು ಕರೆದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.