Rain Alert: ಮಿತಿ ದಾಟಿದ ಸೈಕ್ಲೋನ್ ತೀವ್ರತೆ! ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ-ಹೈ ಅಲರ್ಟ್ ಘೋಷಣೆ

Biparjoy cyclonic storm: ಚಂಡಮಾರುತವು 'ತೀವ್ರ ಸೈಕ್ಲೋನಿಕ್ ಚಂಡಮಾರುತ'ವಾಗಿ ಬದಲಾಗಿದೆ. ಜೂನ್ 15 ರಂದು ಗುಜರಾತ್‌ ನ ಕಚ್ ಜಿಲ್ಲೆ ಮತ್ತು ಪಾಕಿಸ್ತಾನದ ಕರಾಚಿ ನಡುವೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Written by - Bhavishya Shetty | Last Updated : Jun 12, 2023, 07:20 AM IST
    • ಚಂಡಮಾರುತವು ತೀವ್ರ ಸೈಕ್ಲೋನಿಕ್ ಚಂಡಮಾರುತವಾಗಿ ಬದಲಾಗಿದೆ.
    • ಜೂನ್ 15 ರಂದು ಗುಜರಾತ್‌ ನ ಕಚ್ ಜಿಲ್ಲೆ ಮತ್ತು ಪಾಕಿಸ್ತಾನದ ಕರಾಚಿ ನಡುವೆ ಅಪ್ಪಳಿಸುವ ಸಾಧ್ಯತೆಯಿದೆ
    • ಗುಜರಾತ್ ಸರ್ಕಾರವು ಸಾಧ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ
Rain Alert: ಮಿತಿ ದಾಟಿದ ಸೈಕ್ಲೋನ್ ತೀವ್ರತೆ! ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ-ಹೈ ಅಲರ್ಟ್ ಘೋಷಣೆ title=
Karnataka Rain

Biparjoy cyclonic storm: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು 'ಬಿಪರ್‌ಜಾಯ್' ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ನಿಯೋಜಿಸಲಾದ ಕೇಂದ್ರ ಸರ್ಕಾರ ಮತ್ತು ಗುಜರಾತ್ ಆಡಳಿತದ ವಿವಿಧ ಇಲಾಖೆಗಳ ಸನ್ನದ್ಧತೆಯನ್ನು ಭಾನುವಾರ ಪರಿಶೀಲಿಸಿದರು.

ಇದನ್ನೂ ಓದಿ: WTC ಫೈನಲ್ ಮಧ್ಯೆ ಭಾರತದ ನಾಯಕನಿಗೆ ಗಂಭೀರ ಗಾಯ! ಶಸ್ತ್ರಚಿಕಿತ್ಸೆಗೆ ಒಳಪಟ್ಟ ಕ್ರಿಕೆಟಿಗ!

ಚಂಡಮಾರುತವು 'ತೀವ್ರ ಸೈಕ್ಲೋನಿಕ್ ಚಂಡಮಾರುತ'ವಾಗಿ ಬದಲಾಗಿದೆ. ಜೂನ್ 15 ರಂದು ಗುಜರಾತ್‌ ನ ಕಚ್ ಜಿಲ್ಲೆ ಮತ್ತು ಪಾಕಿಸ್ತಾನದ ಕರಾಚಿ ನಡುವೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅವರು ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಿಪರ್‌ಜಾಯ್' ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ಕೇಂದ್ರ ಸರ್ಕಾರ ಮತ್ತು ಗುಜರಾತ್ ಆಡಳಿತದ ವಿವಿಧ ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಿದರು ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆಯ ಪ್ರಕಾರ, ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ದೇಶದಲ್ಲಿ ವಿಪತ್ತು ನಿರ್ವಹಣೆಗಾಗಿ ವಿವಿಧ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸುವ ಜವಾಬ್ದಾರಿಯನ್ನು ಹೊಂದಿದೆ. 'ಬಿಪರ್‌ಜೋಯ್' ಚಂಡಮಾರುತದ ಪರಿಣಾಮಗಳನ್ನು ನಿಭಾಯಿಸಲು ಗುಜರಾತ್ ಆಡಳಿತಕ್ಕೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಸೇನೆ, ನೌಕಾಪಡೆ, ವಾಯುಪಡೆ ಮತ್ತು ಕೋಸ್ಟ್ ಗಾರ್ಡ್‌ ನ ಸಾಕಷ್ಟು ಸಂಖ್ಯೆಯ ತಂಡಗಳು ಮತ್ತು ಸಲಕರಣೆಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: 21 ದಿನಗಳ ಕಾಲ ಈ ರಾಶಿಯವರ ಜಾತಕದಲ್ಲಿ ಅದ್ಭುತವೋ ಅದ್ಭುತ! ಸಾಮಾಜಿಕ ಗೌರವ-ಅಪಾರ ಧನಸಂಪತ್ತು ಪ್ರಾಪ್ತಿ

'ಬಿಪರ್‌ಜೋಯ್' ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ಗುಜರಾತ್ ಸರ್ಕಾರವು ಸಾಧ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಚಂಡಮಾರುತದ ನಂತರ ಸೇವೆಗಳನ್ನು ಪುನಃಸ್ಥಾಪಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಗುಜರಾತ್‌ ನ ಮುಖ್ಯ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಸಚಿವಾಲಯಗಳ ಹಿರಿಯ ಅಧಿಕಾರಿಗಳು, ಭಾರತೀಯ ಹವಾಮಾನ ಇಲಾಖೆ ಮತ್ತು ಎನ್‌ ಡಿ ಆರ್‌ ಎಫ್‌ ನ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News