ರಾಂಚಿಯಲ್ಲಿ ಇಂಡಿಗೋ ವಿಮಾನಕ್ಕೆ ಪಕ್ಷಿ ಡಿಕ್ಕಿ: ತುರ್ತು ಭೂಸ್ಪರ್ಶ

ಪಾಟ್ನಾದಿಂದ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ಸೋಮವಾರ ಮಧ್ಯಾಹ್ನ 1:14 ರ ಸುಮಾರಿಗೆ 4,000 ಅಡಿ ಎತ್ತರದಲ್ಲಿ ಗಿಡುಗವೊಂದರ ಡಿಕ್ಕಿಗೆ ಒಳಗಾಗಿ ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಲ್ಲಿ ವಿಮಾನದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ರಾಂಚಿಯಲ್ಲಿ ಇಂಡಿಗೋ ವಿಮಾನಕ್ಕೆ ಪಕ್ಷಿ ಡಿಕ್ಕಿ: ತುರ್ತು ಭೂಸ್ಪರ್ಶ
Image Credit: ಸಾಂದರ್ಭಿಕ ಚಿತ್ರ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.