ಬೆಂಗಳೂರು: ಕರ್ನಾಟಕದ ಮೇಲೆ ಐದು ರಾಜ್ಯ ಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನ್ನಾಡಿ ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಲಿದೆ ಎಂದು ಹೇಳಿದರು.


"ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲಿದೆ. ನಮ್ಮ ಸರ್ಕಾರ ಈಗಾಗಲೇ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಮುಖಾಂತರ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕ ವನ್ನು ಒಂದು ವರ್ಷದಲ್ಲಿ ಪರಿಣಾಮಕಾರಿಯಾಗಿ ಸಾಧಿಸಿ ತೋರಿಸುವ ಮೂಲಕ ಜನರ ವಿಶ್ವಾಸವನ್ನು ಗಳಿಸುತ್ತೇವೆ, ಆ ಮೂಲಕ 2023 ರಲ್ಲಿ ಇಂದು ಫಲಿತಾಂಶ ಬಂದಂತೆಯೇ ಕರ್ನಾಟಕದ ಜನತೆ ಭಾ.ಜ.ಪ ವನ್ನು ಪುನರಾಯ್ಕೆ ಮಾಡಿ ಐದು ವರ್ಷ ಅಧಿಕಾರದಲ್ಲಿರಲಿದೆ ಎಂಬ ವಿಶ್ವಾಸವಿದೆ" ಎಂದು ಅವರು ಹೇಳಿದರು.


ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತ , ಸಿಎಂ ಆಕಾಂಕ್ಷಿ ಹರೀಶ್ ರಾವತ್ ಗೆ ಸೋಲು


ಜನತೆಗೆ, ಪಕ್ಷಕ್ಕೆ, ಶಾಸಕರಿಗೆ ಇಂದಿನ ಚುನಾವಣಾ ಫಲಿತಾಂಶ ಸಕಾರಾತ್ಮಕ ಉತ್ತೇಜನ ನೀಡಿದೆ,ನಾಲ್ಕು ರಾಜ್ಯ ಗಳಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲು ಜನರ ಆಶೀರ್ವಾದ ಪಡೆದುಕೊಂಡಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡು ಮತ್ತೊಮ್ಮೆ ಮೋದಿಯವರ ನೇತೃತ್ವದಲ್ಲಿ ಮೋದಿ ಮತ್ತು ಯೋಗಿಯ ಡಬಲ್ ಇಂಜಿನ್ ಸರ್ಕಾರ ಉತ್ತರ ಪ್ರದೇಶ (UP Assembly Elections 2022) ವನ್ನು ಮುನ್ನಡೆಸುವ ಕೆಲಸ ಮಾಡುತ್ತಿದೆ.ಐದು ರಾಜ್ಯಗಳ ಮತದಾರರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ.ನಮ್ಮ ನಾಯಕರಾದ ನರೇಂದ್ರ ಮೋದಿಯವರು, ಭಾ.ಜ.ಪ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರು ಹಾಗೂ ಸಂಬಂಧಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.  


ವಿರೋಧ ಪಕ್ಷ ಧೂಳಿಪಟ:


ನರೇಂದ್ರ ಮೋದಿ (PM Narendra Modi) ಯವರ ನಾಯಕತ್ವದಲ್ಲಿರುವ ಕಾರ್ಯಕ್ರಮಗಳು, ಬಡವರ, ರೈತರ, ಹೆಣ್ಣುಮಕ್ಕಳಪರವಾಗಿದೆ. ಕೋವಿಡ್ ನಿರ್ವಹಣೆ, ಆರ್ಥಿಕ ಸಬಲೀಕರಣ ಮುಂತಾದ ಕೆಲಸಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷವನ್ನು ಧೂಳಿಪಟ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸವನ್ನು ಮಾಡುವ ಪಣವನ್ನು ನಮ್ಮ ನಾಯಕರು ತೊಟ್ಟಿದ್ದಾರೆ. ನರೇಂದ್ರ ಮೋದಿಯವರ ನವ ಭಾರತ ನಿರ್ಮಾಣದ ಕನಸು-ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಇದು ಅಕ್ಷರಶಃ ದೇಶದಲ್ಲಿ ಅನುಷ್ಠಾನ ಗೊಳ್ಳುತ್ತಿದೆ. ಭಾರತದ ಉದ್ದಗಲಕ್ಕೂ ಎಲ್ಲರೂ ಒಪ್ಪಿಕೊಳ್ಳುವ ಏಕಮೇವ ನಾಯಕ ನರೇಂದ್ರ ಮೋದಿಯವರು ಎನ್ನುವುದು ಪುನರ್ ಸ್ಥಾಪನೆಯಾಗಿದೆ. ಅವರ ನಾಯಕತ್ವದಲ್ಲಿ ಕರ್ನಾಟಕವೂ ಸೇರಿದಂತೆ ಸಧೃಢ ರಾಜ್ಯ ಮತ್ತು ದೇಶ ಕಟ್ಟಲು ಸಂಕಲ್ಪವನ್ನು ಇಂದು ತೊಟ್ಟಿದ್ದೇವೆ. ಇನ್ನಷ್ಟು ಶಕ್ತಿ, ಶ್ರಮದಿಂದ ಕರ್ನಾಟಕವನ್ನು ಕಟ್ಟುವ ಉತ್ಸಾಹ , ಪ್ರೋತ್ಸಾಹ, ಪ್ರೇರಣೆಯನ್ನು ಚುನಾವಣೆ ನಮಗೆ ಕೊಟ್ಟಿದೆ.


ಇದನ್ನೂ ಓದಿ: Punjab Election Result: ಪಂಜಾಬ್ ನಲ್ಲಿ ಕಾಂಗ್ರೆಸ್ ಸೋಲಿನ ನಂತರ ಸಿದ್ದು ನೀಡಿದ ಮೊದಲ ಹೇಳಿಕೆ ಏನು ?


ಏಪ್ರಿಲ್ ನಲ್ಲಿ ಪ್ರಧಾನಿಗಳು ಕರ್ನಾಟಕಕ್ಕೆ: 


ಏಪ್ರಿಲ್ ನಲ್ಲಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬರಲಿದ್ದಾರೆ. ಬರುವ ಸಂದರ್ಭದಲ್ಲಿ ಒಂದು ವರ್ಷದ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮುಂದೆ ಅವರ ಮುಖಾಂತರ ಅನಾವರಣ ಮಾಡುವ ಕೆಲಸವನ್ನು ಮಾಡಲಿದ್ದೇವೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ