ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿ ಕ್ಯಾಂಪಸ್ ವಿವಿಯಲ್ಲಿ ರಾಹುಲ್ ಗಾಂಧಿ ಭಾಷಣ: ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಇದೇ ವೇಳೆ ಭಾರತೀಯ ಮೂಲದ ಅಮೆರಿಕದ ಜನರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಅವರು ಮಾತನಾಡಿದ್ದಾರೆ. ತಮ್ಮ ಸುದೀರ್ಘ ಭಾಷಣದಲ್ಲಿ ಪ್ರಧಾನಿ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ (2024) ಬಿಜೆಪಿಯನ್ನು ಸೋಲಿಸಬಹುದು ಎಂದು ಹೇಳಿದ್ದಾರೆ. ತಮ್ಮ ವಿಜಯ ಮಂತ್ರವನ್ನು ವಿವರಿಸಿದ ರಾಹುಲ್ ಗಾಂಧಿ, ಭಾರತದ ಎಲ್ಲಾ ವಿರೋಧ ಪಕ್ಷಗಳು ಒಂದಾಗುವಂತೆ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

2024ಕ್ಕೆ ರಾಹುಲ್ ಮಾಸ್ಟರ್ ಪ್ಲಾನ್!


ಅಮೆರಿಕದಲ್ಲಿ ನೆಲೆಸಿರುವ ಜನರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೇಶದ ಸರ್ಕಾರವನ್ನು ಬದಲಾಯಿಸುವ ನಿಟ್ಟಿನಲ್ಲಿ ತಮ್ಮ ಪಕ್ಷವು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಪ್ರತಿಪಕ್ಷಗಳು ‘ಸರಿಯಾದ ಮೈತ್ರಿ’ ಮಾಡಿಕೊಂಡು ಸರಿಯಾಗಿ ಕೆಲಸ ಮಾಡಿದರೆ ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಬಹುದು ಎಂದು ಭಾಷಣದಲ್ಲಿ ಹೇಳಿದ್ದಾರೆ. ಮಂಗಳವಾರ ಸಾಂತಾಕ್ರೂಜ್‌ನ ಕ್ಯಾಲಿಫೋರ್ನಿಯಾ ವಿವಿಯ ಸಿಲಿಕಾನ್ ವ್ಯಾಲಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಡರೇಟರ್ ಮತ್ತು ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದ ರಾಹುಲ್ ಗಾಂಧಿ, ಬಿಜೆಪಿಯ ದೌರ್ಬಲ್ಯ ಮತ್ತು ನ್ಯೂನತೆಗಳನ್ನು ಸ್ಪಷ್ಟವಾಗಿ ನೋಡಬಹುದು ಎಂದು ಹೇಳಿದರು. ನಾವು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಅವಕಾಶಗಳಿವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: Operation Pink: 2000 ರೂ ನೋಟುಗಳ ವಿನಿಮಯದ ಜಾಲ ಬೇಧಿಸಿದ ಜೀ ನ್ಯೂಸ್ ಕುಟುಕು ಕಾರ್ಯಾಚರಣೆ


ಬಿಜೆಪಿಗೆ ನಮ್ಮ ಕಾರ್ಯವಿಧಾನ ಅರ್ಥವಾಗಲಿಲ್ಲ!


ಕರ್ನಾಟಕದ ಗೆಲುವನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷವು ಈ ದೊಡ್ಡ ಗೆಲುವಿಗಾಗಿ ದೀರ್ಘಕಾಲ ಶ್ರಮಿಸಿತ್ತು. ಇಡೀ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಂಪೂರ್ಣ ಚುನಾವಣಾ ಕಾರ್ಯವಿಧಾನವನ್ನು ಬಿಜೆಪಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲವೆಂದು ಹೇಳಿದರು. ಇದಕ್ಕಾಗಿಯೇ ಕರ್ನಾಟಕದಲ್ಲಿ ಅದು ಹೀನಾಯವಾಗಿ ಸೋತಿತು ಮತ್ತು ಕರ್ನಾಟಕದ ವಿಜಯದ ಸಾರವನ್ನು ‘ಭಾರತ್ ಜೋಡೋ ಯಾತ್ರೆ’ಯಿಂದ ಪಡೆಯಲಾಗಿದೆ ಎಂದು ಹೇಳಿದರು.


ಬಿಜೆಪಿ ವಿರುದ್ಧ ದೊಡ್ಡ ಆರೋಪ ಮಾಡಿದ ರಾಹುಲ್ ಗಾಂಧಿ, ತಮ್ಮ ‘ಭಾರತ್ ಜೋಡೋ ಯಾತ್ರೆ’ಯನ್ನು ತಡೆಯುವ ಪ್ರಯತ್ನ ನಡೆದಿತ್ತು ಎಂದು ಹೇಳಿದ್ದಾರೆ. ಪೊಲೀಸರನ್ನು ಬಳಸಿಕೊಂಡು ತಮ್ಮ ಯಾತ್ರೆಯನ್ನು ತಡೆಯುವ ಪ್ರಯತ್ನ ನಡೆದಿದೆ, ಆದರೆ ಸಾರ್ವಜನಿಕರು ಬೆಂಬಲ ನೀಡಿದ್ದರಿಂದ ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ರಾಹುಲ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿದ್ವೇಷ ಭಾಷಣಗಳು ನಿಮ್ಮ ರಾಜಕೀಯ ಪಕ್ಷಗಳನ್ನು ಹಾಳು ಮಾಡದಿರಲಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.