ಉತ್ತರ ಪ್ರದೇಶದಲ್ಲಿ Booth Vijay Abhiyan ಕ್ಕೆ ಚಾಲನೆ ನೀಡಲಿರುವ ಬಿಜೆಪಿ

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈಗ ಬಿಜೆಪಿ ಬೂತ್ ವಿಜಯ ಅಭಿಯಾನವನ್ನು ಆರಂಭಿಸಲಿದೆ.ಸುಮಾರು 27,700 ಬೂತ್ ಗಳಲ್ಲಿ ಈ ಅಭಿಯಾನ ಕಾರ್ಯರೂಪಕ್ಕೆ ಬರಲಿದೆ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ದಾ ತಿಳಿಸಿದ್ದಾರೆ.

Written by - Zee Kannada News Desk | Last Updated : Sep 11, 2021, 06:28 PM IST
  • ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈಗ ಬಿಜೆಪಿ ಬೂತ್ ವಿಜಯ ಅಭಿಯಾನವನ್ನು ಆರಂಭಿಸಲಿದೆ.
  • ಸುಮಾರು 27,700 ಬೂತ್ ಗಳಲ್ಲಿ ಈ ಅಭಿಯಾನ ಕಾರ್ಯರೂಪಕ್ಕೆ ಬರಲಿದೆ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ದಾ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ Booth Vijay Abhiyan ಕ್ಕೆ ಚಾಲನೆ ನೀಡಲಿರುವ  ಬಿಜೆಪಿ  title=
file photo

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈಗ ಬಿಜೆಪಿ ಬೂತ್ ವಿಜಯ ಅಭಿಯಾನವನ್ನು ಆರಂಭಿಸಲಿದೆ.ಸುಮಾರು 27,700 ಬೂತ್ ಗಳಲ್ಲಿ ಈ ಅಭಿಯಾನ ಕಾರ್ಯರೂಪಕ್ಕೆ ಬರಲಿದೆ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ದಾ ತಿಳಿಸಿದ್ದಾರೆ.

ಇದನ್ನೂ ಓದಿ: ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ ಯೋಗಿ ಆದಿತ್ಯನಾಥ್

ಬಿಜೆಪಿ ಮುಖ್ಯಸ್ಥರು ರಾಜ್ಯದ 27,700 ಬೂತ್‌ಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾರೆ ಮತ್ತು ಚುನಾವಣೆಯ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ವರದಿ ಹೇಳಿದೆ.ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath), ಪಕ್ಷದ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ರಾಜ್ಯದ ಇತರ ಅಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: PM Kisan ಯೋಜನೆ ಅಡಿ ಈಗ ರೈತರಿಗೆ ಸಿಗಲಿದೆ 6000 ಬದಲಿಗೆ,12000 ರೂ.! 

ಪನ್ನಾ ಪ್ರಮುಖ್" ಮಾಡುವ ಅಭಿಯಾನವು ಸಹ ಪ್ರಾರಂಭವಾಗುತ್ತದೆ, ಇದು ಸೆಪ್ಟೆಂಬರ್ 20 ರವರೆಗೆ ಮುಂದುವರಿಯುತ್ತದೆ.ನಡ್ಡಾ ಸಾರ್ವಜನಿಕ ಪ್ರತಿನಿಧಿಗಳು, ಪದಾಧಿಕಾರಿಗಳು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಸೆಪ್ಟೆಂಬರ್ 8 ರಂದು ಬಿಜೆಪಿ 2022 ರ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಿಸದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯನ್ನು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಪಕ್ಷದ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇದನ್ನೂ ಓದಿ: LPG Cylinder Booking ಮೇಲೆ ಬಂಪರ್ ಕೊಡುಗೆ! 2700 ರೂ.ಗಳ ಲಾಭದ ಜೊತೆಗೆ ಇನ್ನೂ ಹಲವು ಪ್ರಯೋಜನ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರಸ್ತುತ ಎರಡು ದಿನಗಳ ಕಾಲ ಉತ್ತರ ಪ್ರದೇಶದಲ್ಲಿದ್ದು, ಚುನಾವಣೆಯ ಕಾರ್ಯತಂತ್ರವನ್ನು ರೂಪಿಸಲು ಆರಂಭಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News