ಐದು ರಾಜ್ಯಗಳ ಚುನಾವಣೆ ಹಿನ್ನಲೆಯಲ್ಲ್ಲಿಬಿಜೆಪಿಯಿಂದ ಮಹತ್ವದ ಸಭೆ
.
ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಪೂರ್ವ ಸನ್ನದ್ಧತೆಯನ್ನು ಪರಿಶೀಲಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿರಿಯ ನಾಯಕರು ಶನಿವಾರ ಸಭೆಯನ್ನು ನಡೆಸಿದರು, ಈ ರಾಜ್ಯಗಳಿಗೆ ಸಂಬಂಧಿಸಿದ ರಾಜಕೀಯ ಮತ್ತು ಆಡಳಿತದ ವಿಷಯಗಳ ಬಗ್ಗೆ ಅವರು ಚರ್ಚಿಸಿದರು.
ವರದಿಗಳ ಪ್ರಕಾರ, ಪಕ್ಷದ ಮುಖಂಡರು ಮತ್ತು ಕ್ಯಾಬಿನೆಟ್ ಮಂತ್ರಿಗಳು ಸಮನ್ವಯವನ್ನು ಬಲಪಡಿಸುವತ್ತ ಗಮನ ಹರಿಸುತ್ತಿದ್ದಾರೆ ಮತ್ತು ಸರ್ಕಾರದ ಯೋಜನೆಗಳ ಪರಿಣಾಮವನ್ನು ಹೇಗೆ ಸುಧಾರಿಸಬೇಕು ಮತ್ತು ಜನರಿಂದ ಗರಿಷ್ಠ ಬೆಂಬಲವನ್ನು ಪಡೆಯುವುದು ಹೇಗೆ ಎಂದು ಚರ್ಚಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : CBSE ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿ, ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಮಹತ್ವದ ಬದಲಾವಣೆ
ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆಯಲ್ಲಿ ಹಲವಾರು ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯನ್ನು ಪಕ್ಷದ ಮುಖ್ಯಸ್ಥ ಜೆ ಪಿ ನಡ್ಡಾ ಅವರು ಕರೆದಿದ್ದರು.ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ನರೇಂದ್ರ ಸಿಂಗ್ ತೋಮರ್, ಸ್ಮೃತಿ ಇರಾನಿ, ಪಿಯೂಷ್ ಗೋಯಲ್ ಮತ್ತು ಧರ್ಮೇಂದ್ರ ಪ್ರಧಾನ್ ಈ ಸಭೆಯಲ್ಲಿ ಭಾಗವಹಿಸಿದ್ದರು.
"ಗೂಂಡಾ ಎಂದು ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ, ನಾವು ಪ್ರಮಾಣೀಕರಿಸಿದ ಗೂಂಡಾಗಳು"
ವಿಶೇಷವೆಂದರೆ, ಪಂಜಾಬ್ ಹೊರತುಪಡಿಸಿ ಈ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಮತ್ತು ಮುಂದಿನ ಸುತ್ತಿನ ಚುನಾವಣೆಗಳಲ್ಲಿ ಪ್ರಭಾವಶಾಲಿ ಪ್ರದರ್ಶನವನ್ನು ನೀಡುವ ನಿಟ್ಟಿನಲ್ಲಿ ತನ್ನ ಹಿರಿಯ ನಾಯಕರ ಸರಣಿ ಸಭೆಗಳನ್ನು ನಡೆಸುತ್ತಿದೆ.ಈ ರಾಜ್ಯಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಕ್ಷದ ನಾಯಕರು ಕೈಗೆತ್ತಿಕೊಂಡಿದ್ದಾರೆ, ಏಕೆಂದರೆ ಬಿಜೆಪಿ ನಾಯಕತ್ವವು ವಿವಿಧ ಸಚಿವಾಲಯಗಳು ಮತ್ತು ಪಕ್ಷದ ಸಂಘಟನೆಯ ನಡುವೆ ಸಮನ್ವಯದ ಅಗತ್ಯವನ್ನು ಒತ್ತಿಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.
ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರ ತಮ್ಮ ಸರ್ಕಾರ ಮತ್ತು ಬಿಜೆಪಿಯ ಉನ್ನತ ತಂತ್ರಜ್ಞರೊಂದಿಗೆ ಸಭೆ ನಡೆಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.