ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್‌ನ ಸೂಚನೆಯ ಮೇರೆಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯವನ್ನು ಧ್ವಂಸಗೊಳಿಸುತ್ತಿರುವ ಭಯಾನಕ ಅಹಿತಕರ ಘಟನೆಗಳ ಹಿಂದೆ ಇದೇ ರಾಜಕೀಯವಿದೆ.ಈ ದುರದೃಷ್ಟಕರ ವಿವಾದವನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಯಾವುದೇ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿಲ್ಲ ಮತ್ತು ಈ ಬಿಕ್ಕಟ್ಟು ಭೀಕರ ಸ್ವರೂಪವನ್ನು ಪಡೆಯುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: Early Marriage Tips: ವಿವಾಹ ಯೋಗ ಕೂಡಿ ಬರುತ್ತಿಲ್ಲವೇ? ಇಂದೇ ಈ ಉಪಾಯ ಅನುಸರಿಸಿ
ನಮ್ಮ ಸಂಸ್ಕೃತಿ, ಧರ್ಮ ಮತ್ತು ಸಂವಿಧಾನವು ಯಾವುದೇ ಶಾಸನಬದ್ಧ ನಿಬಂಧನೆಗಳಿಲ್ಲದೆ ಯಾರೊಬ್ಬರ ಮನೆ ಅಥವಾ ಅಂಗಡಿಯನ್ನು ಬುಲ್ಡೋಜ್ ಮಾಡಲು ಅಥವಾ ಅಮಾಯಕರನ್ನು ಬಂಧಿಸಲು ಅಥವಾ ನಿರ್ದಿಷ್ಟ ಸಮುದಾಯವನ್ನು ದೂಷಿಸಲು ಬಿಜೆಪಿ ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದರು.
ಇದನ್ನೂ ಓದಿ: ಈ ಆಟಗಾರನ ವೇಗದ ಬೌಲಿಂಗ್ ನೋಡಿ ಫಿದಾ ಆದ ದಿಲೀಪ್ ವೆಂಗಸರ್ಕಾರ್..!
ಶಾಂತಿಯುತ ಪ್ರತಿಭಟನೆ ನಡೆಸುವ ಜನರ ಪ್ರಜಾಸತ್ತಾತ್ಮಕ ಹಕ್ಕನ್ನು ಕಡೆಗಣಿಸಲಾಗುತ್ತಿದ್ದು, ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಇಡೀ ವಿಶ್ವದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಯಾದವ್ ಹೇಳಿದರು.
‘ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದು, ಇದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಾಬೀತಾಗಿದೆ, ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ವೈಫಲ್ಯವನ್ನು ಮರೆಮಾಚಲು ಮುಖ್ಯಮಂತ್ರಿಗಳು ಸುಳ್ಳು ಕಥೆಗಳನ್ನು ಹೆಣೆದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ.ರಾಜ್ಯಪಾಲರು ಕೂಡಲೇ ಪರಿಸ್ಥಿತಿಯನ್ನು ಮನಗಂಡು ರಾಜ್ಯದಲ್ಲಿ ಶಾಂತಿ ಮತ್ತು ಪರಸ್ಪರ ವಿಶ್ವಾಸವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಅನಿಯಂತ್ರಿತ ಹಾಗೂ ಅಧಿಕಾರ ದುರುಪಯೋಗದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. Youtube, Facebook, Twitterನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
https://apple.co/3hEw2hyApple Link -
https://bit.ly/3hDyh4GAndroid Link -
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...