ನವದೆಹಲಿ: 2014ರ ಚುನಾವಣೆಯಲ್ಲಿ ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಗಳಿಸಿದ ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನವನ್ನು ಬಿಜೆಪಿ ಗಳಿಸಲಿದೆ ಎಂದು ಕೇಂದ್ರ ಸಚಿವ್ ರಾಮ್ ದಾಸ್ ಅಥವಾಳೆ ಭವಿಷ್ಯ ನುಡಿದಿದ್ದಾರೆ.
ಉತ್ತರಪ್ರದೇಶದಲ್ಲಿ ಬಿಜೆಪಿ ಈ ಬಾರಿ ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಮೈತ್ರಿಯಿಂದಾಗಿ 10-15 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಇನ್ನು ಮಹಾರಾಷ್ಟ್ರದಲ್ಲಿ 2014 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಸ್ಥಾನಗಳಿಗಿಂತ 5-6 ಸ್ಥಾನಗಳನ್ನು ಬಿಜೆಪಿ ಪಕ್ಷ ಕಳೆದುಕೊಂಡಿದೆ ಎಂದು ಅಥವಾಳೆ ಹೇಳಿದ್ದಾರೆ.2014 ರಲ್ಲಿ ಬಿಜೆಪಿ ಮತ್ತು ಅದರ ಮೈತ್ರಿಕೂಟಗಳಾದ ಅಪ್ನಾ ದಳ್ ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 73 ಸ್ಥಾನಗಳನ್ನು ಗೆದ್ದಿತ್ತು.
2014 ರಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ 48 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿತ್ತು. 2014ರಲ್ಲಿ,ಸ್ವಾಭಿಮಾನಿ ಸೆಟ್ಕರಿ ಪಕ್ಷದ ರಾಜು ಶೆಟ್ಟಿ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿದ್ದರು. ಆದರೆ ಈ ಬಾರಿ ಅವರು ಕಾಂಗ್ರೆಸ್-ಎನ್ಸಿಪಿ ಮೈತ್ರಿಕೂಟವನ್ನು ಬೆಂಬಲಿಸುತ್ತಿದ್ದಾರೆ ಎಂದು ಅಥಾವಾಳೆ ತಿಳಿಸಿದ್ದಾರೆ.
ಈ ಬಾರಿ ಬಿಜೆಪಿ ಪಶ್ಚಿಮ ಬಂಗಾಳ ಮತ್ತು ಓಡಿಸ್ಸಾಗಳಲ್ಲಿ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿದರು.