ಗೋವಾ: ಭಾರತೀಯ ಜನತಾ ಪಕ್ಷ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ಗೋವಾದಲ್ಲಿ ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಫೋಗಟ್ ತಮ್ಮ ಕೆಲವು ಸಿಬ್ಬಂದಿ ಜೊತೆ ಗೋವಾಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅಂಜುನಾದ ಗ್ರ್ಯಾಂಡ್ ಲಿಯೋನಿ ರೆಸಾರ್ಟ್‌ನಲ್ಲಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Viral Video: ಮಂಗನಿಗೆ ಶರೇ ಕುಡಿಸಿದ್ರೆ ಏನಾಗಬಹುದು? ಎಣ್ಣೆ ಹೊಡಿದ ಕೋತಿ ಮಾಡಿದ ಕಿತಾಪತಿ ನೋಡಿ
ಸೋನಾಲಿ ಫೋಗಟ್ ಅವರಿಗೆ 43 ವರ್ಷ ವಯಸ್ಸಾಗಿತ್ತು. ಇವರು ಹರಿಯಾಣದ ಫತೇಹಾಬಾದ್‌ನ ಭೂತಾನ್ ಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ್ದು, 2019 ರ ವಿಧಾನಸಭಾ ಚುನಾವಣೆಯಲ್ಲಿ ಹರಿಯಾಣದ ಆದಂಪುರ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಟಿಕೆಟ್ ಪಡೆದು ಕುಲದೀಪ್ ಬಿಷ್ಣೋಯ್ ವಿರುದ್ಧ ಸ್ಪರ್ಧಿಸಿದ್ದರು.
ಮೂರು ಬಾರಿ ಶಾಸಕರಾಗಿದ್ದ ಮತ್ತು ಅಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿದ್ದ ಭಜನ್ ಲಾಲ್ ಅವರ ಮಗ ಕುಲದೀಪ್ ಬಿಷ್ಣೋಯ್ ವಿರುದ್ಧ ಸೊನಾಲಿ ಸೋಲು ಕಂಡಿದ್ದರು. ಆದರೆ ಸೋಲನ್ನು ಅನುಭವಿಸಿದರೂ ಸಹ ಅವರ ಪ್ರಖ್ಯಾತಿ ಕುಂದಿರಲಿಲ್ಲ.
ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಖ್ಯಾತಿ ಗಳಿಸಿದ್ದ ಸೋನಾಲಿ ರಾಜ್ಯಾದ್ಯಂತ ಫಾಲೋವರ್ಸ್ಗಳನ್ನು ಹೊಂದಿದ್ದರು. ಇನ್ನು ಕೆಲ ದಿನಗಳ ಹಿಂದೆಯಷ್ಟೇ ಕುಲದೀಪ್ ಬಿಷ್ಣೋಯ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿಕೊಂಡಿದ್ದರು. ಆ ಬಳಿಕ ಸೋನಾಲಿಯವರನ್ನು ಭೇಟಿ ಮಾಡಿ ಮಾತುಕತೆಯನ್ನೂ ನಡೆಸಲಾಗಿತ್ತು.
ಇವಿಷ್ಟೇ ಅಲ್ಲದೆ, ಮುಂಬರುವ ಆದಂಪುರ್ ಉಪಚುನಾವಣೆಯಲ್ಲಿ ಸೋನಾಲಿಯವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಹೇಳಲಾಗಿತ್ತು.
ಅವರು 2016 ರಲ್ಲಿ 'ಅಮ್ಮ: ಏಕ್ ಮಾ ಜೋ ಲಾಖೋಂ ಕೆ ಲಿಯೆ ಬಾನಿ ಅಮ್ಮಾ' ಟಿವಿ ಶೋ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. 2019 ರಲ್ಲಿ 'ದಿ ಸ್ಟೋರಿ ಆಫ್ ಬದ್ಮಾಶ್‌ಗಢ್' ವೆಬ್ ಸರಣಿಯಲ್ಲೂ ನಟಿಸಿದ್ದರು. ಇನ್ನು ರಿಯಾಲಿಟಿ ಶೋ ಬಿಗ್ ಬಾಸ್ 2020ರ ಆವೃತ್ತಿಯಲ್ಲೂ ಭಾಗವಹಿಸಿದ್ದರು.
ಇನ್ನು ಅದೇ ವರ್ಷ ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕವಾಗಿ ಅಧಿಕಾರಿಯೊಬ್ಬರನ್ನು ಥಳಿಸಿ ಸುದ್ದಿಯಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ, ಸೋನಾಲಿ ಫೋಗಟ್ ತನ್ನ ಪಾದರಕ್ಷೆಯಿಂದ ವ್ಯಕ್ತಿಯನ್ನು ಹೊಡೆಯುತ್ತಿರುವುದು ಕಂಡುಬಂದಿತ್ತು.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಭೂಕಂಪದ ಅನುಭವ
ಸೊನಾಲಿ ಅವರಿಗೆ ಯಶೋಧರ ಫೋಗಟ್ ಎಂಬ ಮಗಳಿದ್ದಾಳೆ. ಅವರ ಪತಿ ಸಂಜಯ್ ಫೋಗಟ್ ಅವರು ತಮ್ಮ ಫಾರ್ಮ್‌ಹೌಸ್‌ನಲ್ಲಿ 2016ರಲ್ಲಿ ನಿಧನರಾಗಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.