ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಪಾಕಿಸ್ತಾನ್ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರನ್ನು ಚುನಾವಣಾ ಪ್ರಚಾರಕ್ಕಾಗಿ ಆಹ್ವಾನಿಸಲು ಯೋಜಿಸುತ್ತಿದೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಭಾನುವಾರ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ನಾಯಕ ಮುಕುಲ್ ರಾಯ್, "ಪಶ್ಚಿಮ ಬಂಗಾಳದಲ್ಲಿ ಪಕ್ಷದ ಪರವಾಗಿ ಪ್ರಚಾರ ಮಾಡಲು ಟಿಎಂಸಿ ಪಾಕಿಸ್ತಾನದ ಮಾಜಿ ಆಟಗಾರ ಹಾಗೂ ಪ್ರಸ್ತುತ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಆಹ್ವಾನಿಸಿದೆ" ಎಂದು ಹೇಳಿದರು.


ಇದೇ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ನೊಂದಣಿ ರದ್ದುಗೊಳಿಸುವಂತೆ ಮನವಿ ಮಾಡಿ ದೆಹಲಿಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಾಗಿ ಮುಕುಲ್ ರಾಯ್ ತಿಳಿಸಿದರು.


ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗಾಗಿ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳು ಪ್ರಚಾರ ನಡೆಸುತ್ತಿದ್ದಾರೆ ಎಂಬ ಬಗ್ಗೆ ವರದಿಯಾದ ಬಳಿಕ ಈ ಹೇಳಿಕೆ ನೀಡಲಾಗಿದೆ. 


ಬಾಂಗ್ಲಾದೇಶದ ನಟರಾದ - ಘಾಜಿ ಅಹ್ಮದ್ ನೂರ್ ಮತ್ತು ಫರ್ದಾಸ್ ಅಹ್ಮದ್ - ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಟಿಎಂಸಿ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.