close

News WrapGet Handpicked Stories from our editors directly to your mailbox

ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ಗೆ ಸೋಲು

ದೇಶದ ಗಮನ ಸೆಳೆದಿದ್ದ ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ಗೆ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ ಎದುರು ಭಾರಿ ಸೋಲನ್ನು ಅನುಭವಿಸಿದ್ದಾರೆ. 

Updated: May 23, 2019 , 06:03 PM IST
ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ಗೆ ಸೋಲು

ನವದೆಹಲಿ: ದೇಶದ ಗಮನ ಸೆಳೆದಿದ್ದ ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ಗೆ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ ಎದುರು ಭಾರಿ ಸೋಲನ್ನು ಅನುಭವಿಸಿದ್ದಾರೆ. 

2016 ರಲ್ಲಿ ಜೆಎನ್ಯು ಪ್ರಕರಣದ ಮೂಲಕ ಬೆಳಕಿಗೆ ಬಂದ ಕನ್ನಯ್ಯಕುಮಾರ್ ತಮ್ಮ ಆಜಾದಿ ಭಾಷಣದ ಮೂಲಕ ಗಮನ ಸೆಳೆದಿದ್ದರು. ಇದಾದ ನಂತರ ಹಲವಾರು ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು. ಈ ಎಲ್ಲ ಬೆಳವಣಿಗೆ ಹಿನ್ನಲೆಯಲ್ಲಿ ಇದೇ ಮೊದಲ ಬಾರಿಗೆ ಕನ್ನಯ್ಯ ಕುಮಾರ್ ಸಿಪಿಐ ಅಭ್ಯರ್ಥಿಯಾಗಿ ಬೇಗುಸರಾಯಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕಾರಣಕ್ಕೂ ಪ್ರವೇಶಿಸಿದ್ದರು.  

ಪ್ರಾರಂಭದಲ್ಲಿ ಮಹಾಘಟಬಂಧನ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ನಂತರ ಆರ್ಜೆಡಿಯ ತನ್ವೀರ್ ಹಾಸನ್ ರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವ ಮೂಲಕ ಕನ್ನಯ್ಯರಿಗೆ ಬೆಂಬಲ ನೀಡಲು ನಿರಾಕರಿಸಲಾಯಿತು. ಈಗ ಸದ್ಯ ಬಂದಿರುವ ಮಾಹಿತಿ ಪ್ರಕಾರ ಬಿಜೆಪಿಯ ಗಿರಿರಾಜ್ ಸಿಂಗ್ 6,03,522 ಮತಗಳನ್ನು ಪಡೆದರೆ ಕನ್ನಯ್ಯ 2,36,133 ಮತಗಳನ್ನು ಪಡೆದಿದ್ದಾರೆ. ಒಟ್ಟು 3,94,000 ಅಂತರದ ಮತಗಳಿಂದ ಕನ್ನಯ್ಯ ಸೋಲನ್ನು ಅನುಭವಿಸಿದ್ದಾರೆ.