ನವದೆಹಲಿ: ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡ ರವೀಂದ್ರ ಖರತ್ ಸೇರಿದಂತೆ ಅವರ ಕುಟುಂಬದ ನಾಲ್ವರು ಸದಸ್ಯರನ್ನು ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಅವರ ನಿವಾಸದಲ್ಲಿ ಮೂವರು ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.


COMMERCIAL BREAK
SCROLL TO CONTINUE READING

ಭಾನುವಾರ ತಡರಾತ್ರಿ ಬಿಜೆಪಿ ಕಾರ್ಪೊರೇಟರ್ ರವೀಂದ್ರ ಖರತ್ (55) ಮತ್ತು ಅವರ ಕುಟುಂಬ ಸದಸ್ಯರು ತಮ್ಮ ನಿವಾಸದಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಭೂಸಾವಲ್ ನಗರದ ತಮ್ಮ ನಿವಾಸದ ಹೊರಗೆ ಕೆಲ ಅಪರಿಚಿತ ವ್ಯಕ್ತಿಗಳು ಬಿಜೆಪಿ ಮುಖಂಡ ರವೀಂದ್ರ ಖರತ್, ಅವರ ಸಹೋದರ ಸುನಿಲ್ ಖರತ್, ಪುತ್ರರಾದ ರೋಹಿತ್ ಮತ್ತು ಪ್ರೇಮ್ ಸಾಗರ್ ಮತ್ತು ಸ್ನೇಹಿತ ಸುಮಿತ್ ಫೆಡ್ರೆ ಅವರನ್ನು ಭಾನುವಾರ ರಾತ್ರಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಂಜಾಬ್ರಾವ್ ಉಗಾಲೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.


ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಇತರ ಮೂವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ದುಷ್ಕರ್ಮಿಗಳು ಈ ದಾಳಿಗೆ ಬಂದೂಕು ಮತ್ತು ಚಾಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


"ಇದೊಂದು ವೈಯಕ್ತಿಕ ವಿವಾದದ ಪ್ರಕರಣ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.