ನವದೆಹಲಿ: ಬಿಜೆಪಿಯ ಮೆಹ್ರೌಲಿ ಜಿಲ್ಲೆ ಅಧ್ಯಕ್ಷ ತನ್ನ ಹೆಂಡತಿಯನ್ನು ಬಹಿರಂಗವಾಗಿ ಹೊಡೆದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈಗ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಈಗ ಈ ವಿಚಾರವಾಗಿ ಮಾತನಾಡಿರುವ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ 'ಮಹಿಳೆಯ ಘನತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ತನಿಖಾ ಸಮಿತಿಯನ್ನು ರಚಿಸಿದ್ದೇವೆ ಮತ್ತು ವ್ಯಕ್ತಿಯನ್ನು ಜಿಲ್ಲಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕಲಾಗಿದೆ" ಎಂದು ತಿವಾರಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.


ಬಿಜೆಪಿ ತನ್ನ ಮೆಹ್ರೌಲಿ ಜಿಲ್ಲಾ ಮುಖ್ಯಸ್ಥರಾಗಿ ಆಜಾದ್ ಸಿಂಗ್ ಅವರನ್ನು ಅಮಾನತುಗೊಳಿಸಿದೆ. ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಗುರುವಾರ ನಡೆದ ಮತದಾನದ ಸನ್ನದ್ಧತೆಯ ಸಭೆಯ ನಂತರ ನಾಯಕ ದಕ್ಷಿಣ ದೆಹಲಿಯ ಮಾಜಿ ಮೇಯರ್ ಅವರ ಪತ್ನಿಗೆ ಪಕ್ಷದ ದೆಹಲಿ ಕಚೇರಿಯಲ್ಲಿ ಕಪಾಳ ಮೋಕ್ಷ ಮಾಡಿದ್ದಾರೆ.


ಆದರೆ ಈ ವಿಚಾರವಾಗಿ ಇದುವರೆಗೆ ಯಾವುದೇ ಪೋಲಿಸ್ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ. ಈ ಕುರಿತಾಗಿ ಪ್ರತಿಕ್ರಿಯಿಸಿದ ದೆಹಲಿ ಪೋಲಿಸ್ ಅಧಿಕಾರಿಯೊಬ್ಬರು 'ಈ ಘಟನೆಯಲ್ಲಿ ಭಾಗಿಯಾದ ಯಾರಿಂದಲೂ ನಮಗೆ ಯಾವುದೇ ದೂರು ಬಂದಿಲ್ಲ. ನಮಗೆ ದೂರು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು' ಎಂದು  ಪಿಟಿಐಗೆ ತಿಳಿಸಿದ್ದಾರೆ.


ಈ ಘಟನೆ ನಡೆದಾಗ ಕೇಂದ್ರ ಸಚಿವ ಜಾವೆಡೆಕರ್ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಬಿಜೆಪಿ ಕಚೇರಿಯಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.