Maharashtra Political Crisis: ಮಹಾರಾಷ್ಟ್ರದ ರಾಜಕೀಯದಲ್ಲಿ ಹಠಾತ್ ಏರಿಳಿತದ ನಂತರ, ಪ್ರತಿಪಕ್ಷಗಳ ಒಗ್ಗಟ್ಟಿಗೆ ಭಾರಿ ಹಿನ್ನಡೆ ಉಂಟಾಗಿದೆ. ಇದು 2024 ರ ಲೋಕಸಭೆ ಚುನಾವಣೆಗೂ ಮುನ್ನವೇ ಛಿದ್ರವಾಗುವ ಲಕ್ಷಣ ಕಂಡುಬರುತ್ತಿದೆ. ಏಕನಾಥ್ ಶಿಂಧೆ ಸರ್ಕಾರಕ್ಕೆ ಅಜಿತ್ ಪವಾರ್ ಸೇರ್ಪಡೆಯಾದ ನಂತರ ಭಾರತೀಯ ಜನತಾ ಪಕ್ಷವು (ಬಿಜೆಪಿ) ವಿರೋಧ ಪಕ್ಷಗಳ ಕುಲಕ್ಕೆ ಸೆಡ್ಡು ಹೊಡೆದಿದೆ. ಈ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ದೊಡ್ಡ ಉತ್ತೇಜನ ಸಿಕ್ಕಿದ್ದು, ಜೆಡಿಯು ಮೂಲಗಳ ಪ್ರಕಾರ ಜುಲೈ 13-14 ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ವಿರೋಧ ಪಕ್ಷಗಳ ಸಭೆಯನ್ನು ಮುಂದೂಡಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ODIನಲ್ಲಿ ದ್ವಿಶತಕ ಬಾರಿಸಿದ ಸ್ಫೋಟಕ ಬ್ಯಾಟ್ಸ್’ಮನ್’ಗಳು ಇವರೇ: ಭಾರತದ ಈ ಆಟಗಾರರೂ ಇದ್ದಾರೆ…


ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ ಸಿ ಪಿ) ನಾಯಕ ಅಜಿತ್ ಪವಾರ್ ಅವರ ಈ ಹೆಜ್ಜೆಯ ನಂತರ, ಶರದ್ ಪವಾರ್ ಅವರು ಭಾರಿ ಹಿನ್ನಡೆ ಅನುಭವಿಸಿದ್ದಾರೆ ಮತ್ತು ಎನ್‌ ಸಿ ಪಿ ಎರಡು ಹೋಳಾಗಿದೆ. ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಜೊತೆಗೆ ಪಕ್ಷದ ಚುನಾವಣಾ ಚಿಹ್ನೆಯನ್ನು ಪಡೆದುಕೊಂಡಿದ್ದಾರೆ. ಎಲ್ಲಾ ಶಾಸಕರು ನನ್ನೊಂದಿಗೆ ಇದ್ದಾರೆ ಮತ್ತು ನಾವು ಪಕ್ಷವಾಗಿ ಬೆಂಬಲ ನೀಡಿದ್ದೇವೆ ಎಂದು ಹೇಳಿದ್ದಾರೆ.


ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುತ್ತಾ ಬಿಜೆಪಿ?


ವರದಿಗಳ ಪ್ರಕಾರ, ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರಕ್ಕೆ ಸೇರಿದ ನಂತರ, ಭಾರತೀಯ ಜನತಾ ಪಕ್ಷವು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆದಂತಾಗಿದೆ. ಅಜಿತ್ ಪವಾರ್ ಆಗಮನದಿಂದ ಮಹಾರಾಷ್ಟ್ರದಲ್ಲಿ ಬಿಜೆಪಿ ಬಲಗೊಳ್ಳಲಿದೆ. ಇದರೊಂದಿಗೆ ಬಿಜೆಪಿ ವಿರೋಧಿ ಹೋರಾಟಕ್ಕೂ ಬ್ರೇಕ್ ಬಿದ್ದಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ಬಿಜೆಪಿ ಕೇಂದ್ರದ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂಬುದನ್ನು ಇಲ್ಲಿ ಉಲ್ಲೇಖಿಸಲೇಬೇಕು.


2024 ರ ಲೋಕಸಭೆ ಚುನಾವಣೆಗೆ ಮೊದಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಜೂನ್ 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆದಿದ್ದು, ಜುಲೈ 13-14 ರಂದು ಬೆಂಗಳೂರಿನಲ್ಲಿ ಮುಂದಿನ ಸಭೆ ನಿಗದಿಯಾಗಿದೆ. ಆದರೆ ಇದೀಗ ಅದನ್ನು ಮುಂದೂಡಲಾಗುವುದು ಎಂದು ಎನ್‌ ಸಿ ಪಿ ಹಿರಿಯ ನಾಯಕರೊಬ್ಬರು ಖಚಿತಪಡಿಸಿದ್ದಾರೆ. ಯಾರು ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದು ನಿರ್ಧಾರವಾಗಬೇಕಿತ್ತು.


ಇದನ್ನೂ ಓದಿ: 1 ವರ್ಷ ಈ ರಾಶಿಯವರ ಯಶಸ್ಸನ್ನು ತಡೆಯುವವರೇ ಇಲ್ಲ: ಉದ್ಯೋಗದಲ್ಲಿ ಬಡ್ತಿ, ಕಾಣುವರು ಸಾಲು ಸಾಲು ಗೆಲುವು!


ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಣ್ಣ ಪಕ್ಷಗಳನ್ನು ಬಿಜೆಪಿಯೊಂದಿಗೆ ಸೇರ್ಪಡೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಜೊತೆಗೆ ಮುಖೇಶ್ ಸಾಹ್ನಿಯವರ ವಿಕಾಸಶೀಲ್ ಇನ್ಸಾನ್ ಪಾರ್ಟಿ ಮತ್ತು ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷವನ್ನು ಸಹ ತನ್ನತ್ತ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಮತ್ತೊಂದೆಡೆ, ಅಮಿತ್ ಶಾ ಶಿರೋಮಣಿ ಅಕಾಲಿದಳ, ತೆಲುಗು ದೇಶಂ ಪಕ್ಷವನ್ನು ಸಹ ಒಟ್ಟುಗೂಡಿಸುವತ್ತ ಬಿಜೆಪಿ ಗಮನ ಹರಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3COfPCC 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.