BJP Manifesto for Lok Sabha Election 2024 : ಲೋಕಸಭಾ ಚುನಾವಣೆ 2024 ಕ್ಕೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಭಾನುವಾರ (ಏಪ್ರಿಲ್ 14) ಬಿಡುಗಡೆ ಮಾಡಿದೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.


COMMERCIAL BREAK
SCROLL TO CONTINUE READING

ಪ್ರಧಾನಿ ಮೋದಿ ಅವರು ಚುನಾವಣಾ ಪ್ರಣಾಳಿಕೆ ತಯಾರಿಸಲು 25 ಜನವರಿ 2024 ರಂದು ಸಾರ್ವಜನಿಕರಿಂದ ಸಲಹೆಗಳನ್ನು ಕೇಳಿದ್ದರು. ಇದಾದ ನಂತರ ಪಕ್ಷಕ್ಕೆ 15 ಲಕ್ಷಕ್ಕೂ ಹೆಚ್ಚು ಸಲಹೆಗಳು ಬಂದಿದ್ದವು. ನಮೋ ಆ್ಯಪ್ ಮೂಲಕ 4 ಲಕ್ಷ ಮಂದಿ ಹಾಗೂ ವಿಡಿಯೋ ಮೂಲಕ 11 ಲಕ್ಷ ಮಂದಿ ಸಲಹೆಗಳನ್ನು ನೀಡಿದ್ದಾರೆ. ಮಾರ್ಚ್ 30 ರಂದು ಬಿಜೆಪಿ ಪ್ರಣಾಳಿಕೆ ಸಮಿತಿಯನ್ನು ರಚಿಸಲಾಯಿತು. ರಾಜನಾಥ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು. 4 ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ 27 ಸದಸ್ಯರನ್ನು ಪ್ರಣಾಳಿಕೆ ಸಮಿತಿಯಲ್ಲಿ ಸೇರಿಸಲಾಯಿತು. ವಿಶೇಷವೆಂದರೆ ದೇಶಾದ್ಯಂತ ಬಂದಿರುವ ಸಲಹೆಗಳನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದೆ.  


ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಯ ದಿನ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿ ಹ್ಯಾಟ್ರಿಕ್ ಗೆಲುವಿಗಾಗಿ ಹಲವು ದೊಡ್ಡ ಭರವಸೆಗಳನ್ನು ನೀಡಿದೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಮತ್ತು ಮೋದಿ ಗ್ಯಾರೆಂಟಿ ಮೂಲಕ ಬಿಜೆಪಿ ತನ್ನ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಬಿಜೆಪಿಯ ಪ್ರಣಾಳಿಕೆಯಲ್ಲಿ ಮೋದಿ ಗ್ಯಾರಂಟಿಯ ಝಲಕ್ ಕೂಡ ಕಂಡುಬಂದಿದೆ. 


ಇದನ್ನೂ ಓದಿ: "ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ 3 ಕ್ಷೇತ್ರಗಳನ್ನೂ ದಾಟುವುದಿಲ್ಲ" 


ಯುವಕರು, ರೈತರು, ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ತನ್ನ ಪ್ರಣಾಳಿಕೆ ಹಲವು ಕಾರ್ಯಕ್ರಮಗಳನ್ನು ಘೋಷಿಸಿದೆ. ಮೀನುಗಾರರಿಗೆ ವಿಮಾ ಸೌಲಭ್ಯ, ಧಾನ್ಯಗಳನ್ನು ಸೂಪರ್‌ಫುಡ್‌ಗಳಾಗಿ ಅಭಿವೃದ್ಧಿಪಡಿಸುವ ಭರವಸೆ, ಏಕಲವ್ಯ ಶಾಲೆ, ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಕಲ್ಯಾಣದ ಧೇಯೋದ್ದೇಶವನ್ನು ಈ ಪ್ರಣಾಳಿಕೆಯಲ್ಲಿ ಹೇಳಿದೆ.


ಬಿಜೆಪಿ ಪ್ರಣಾಳಿಕೆಯಲ್ಲಿರುವ ಭರವಸೆಗಳ ಹೈಲೈಟ್ಸ್‌ :


- 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ.


- ಉಚಿತ ಪಡಿತರ, ನೀರು ಮತ್ತು ಅನಿಲವನ್ನು ಒದಗಿಸುತ್ತೇವೆ.


- ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ.


- ಭಾರತದ ಎಲ್ಲಾ ಭಾಷೆಗಳಲ್ಲಿ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲಾಗುವುದು.


- ಹಲವು ವಂದೇ ಭಾರತ್ ರೈಲುಗಳನ್ನು ತರುತ್ತೇವೆ.


- ಪೆಟ್ರೋಲ್ ಆಮದು ಕಡಿಮೆ ಮಾಡಲಾಗುವುದು


- ಯುವಕರಿಗೆ ಉದ್ಯೋಗಕ್ಕೆ ಒತ್ತು ನೀಡಲಾಗುವುದು.


- ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುವುದು.


- ಉಚಿತ ಪಡಿತರ ಯೋಜನೆ ಮುಂದಿನ 5 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ.


'ಅಭಿವೃದ್ಧಿ' ಯೇ ದೊಡ್ಡ ಅಜೆಂಡಾ :


ರಾಮಮಂದಿರ ನಿರ್ಮಾಣ ಮತ್ತು 370 ನೇ ವಿಧಿಯನ್ನು ತೆಗೆದುಹಾಕುವ ಪ್ರಮುಖ ವಿಷಯಗಳನ್ನು ಬಿಜೆಪಿ ಈಗಾಗಲೇ ಪೂರ್ಣಗೊಳಿಸಿದೆ. ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯ ದಿನವನ್ನು ಬಿಜೆಪಿ ಆಯ್ಕೆ ಮಾಡಿದ್ದು ಗಮನಿಸಬೇಕಾದ ಅಂಶವಾಗಿದೆ. 2014 ರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 07 ರಂದು ಬಿಡುಗಡೆ ಮಾಡಿತ್ತು. 2019 ರಲ್ಲಿ, ಪ್ರಣಾಳಿಕೆಯನ್ನು ಏಪ್ರಿಲ್ 8 ರಂದು ಬಿಡುಗಡೆ ಮಾಡಲಾಯಿತು ಮತ್ತು ಈ ಬಾರಿ ಏಪ್ರಿಲ್‌ 14 ರಂದು ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ: ಮೈಸೂರಿಗೆ ಬರುತ್ತಿರುವ ಪ್ರಧಾನಿ ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ: ಸಿದ್ದರಾಮಯ್ಯ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.