ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿದ ಪ್ರತಿಕ್ರಿಯೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ. ಬಿಜೆಪಿ ಪ್ರವಾದಿ ಮೊಹಮ್ಮದ್ ಮತ್ತು ಮುಸ್ಲಿಮರನ್ನು ದ್ವೇಷಿಸುತ್ತದೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಟಿ ರಾಜಾ ಸಿಂಗ್ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಲ್ಲದೆ, ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಭೂಕಂಪದ ಅನುಭವ
ಹೈದರಾಬಾದ್ನಲ್ಲಿ ಸೋಮವಾರ ಸಂಜೆಯಿಂದ ಮುಸ್ಲಿಮರ ಪ್ರತಿಭಟನೆ ಮುಂದುವರಿದಿದೆ. ಹೈದರಾಬಾದ್ ಪೊಲೀಸರು ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದರೂ ಸಹ ಅವರನ್ನು ಬಂಧಿಸಬೇಕು ಎಂದು ಮುಸ್ಲಿಮರು ಒತ್ತಾಯಿಸಿದ್ದಾರೆ.
ಅಸಾದುದ್ದೀನ್ ಓವೈಸಿ ಹೇಳಿದ್ದೇನು?
“ಬಿಜೆಪಿ ಶಾಸಕರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಹೈದರಾಬಾದ್ನಲ್ಲಿ ಶಾಂತಿ ನೆಲೆಸುವುದು ಬಿಜೆಪಿಗೆ ಇಷ್ಟವಿಲ್ಲ. ಬಿಜೆಪಿ ಪ್ರವಾದಿ ಮುಹಮ್ಮದ್ ಮತ್ತು ಮುಸ್ಲಿಮರನ್ನು ದ್ವೇಷಿಸುತ್ತದೆ. ಅವರು ಭಾರತದ ಸಾಮಾಜಿಕ ರಚನೆಯನ್ನು ನಾಶಮಾಡಲು ಬಯಸುತ್ತಾರೆ” ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ
ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರ ಹೇಳಿಕೆಯಿಂದ ಕುಪಿತಗೊಂಡಿರುವ ಮುಸ್ಲಿಂ ಸಮುದಾಯದ ಜನರು ಸೋಮವಾರ ಸಂಜೆಯಿಂದ ಇಲ್ಲಿಯವರೆಗೆ ಹೈದರಾಬಾದ್ನ ಹಲವು ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಪ್ರತ್ಯೇಕತೆಯ ಘೋಷಣೆಗಳೂ ಸಹ ಮೊಳಗಿದವು. ಪೊಲೀಸರು ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ತೆಗೆದುಕೊಂಡು ಶಾಂತಿಗಾಗಿ ಜನರಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: 'ವಿಕಿಪೀಡಿಯ' ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್: ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್
ವಿವಾದಾತ್ಮಕ ಹೇಳಿಕೆಗೆ ಟಿ ರಾಜಾ ಸ್ಪಷ್ಟನೆ
ಆದರೆ, ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಬಂಧನಕ್ಕೂ ಮುನ್ನ ವಿಡಿಯೋ ಬಿಡುಗಡೆ ಮಾಡಿದ್ದು, ತಾನು ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಟ್ಯಾಂಡಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ನಮ್ಮ ದೇವರನ್ನು ಅಗೌರವಿಸಿದ್ದಾರೆ. ಪ್ರತಿಯೊಂದು ಕ್ರಿಯೆಗೂ ಒಂದು ಪ್ರತಿಕ್ರಿಯೆ ಇರುತ್ತದೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.